ಹಿಂಸಾಚಾರ ಖಂಡಿಸಿ ಮಂಗಳೂರಿನಲ್ಲಿ ಬಜರಂಗದಳ ಪ್ರತಿಭಟನೆ ಸಿದ್ಧತೆ ; ಅವಕಾಶ ನೀಡಲ್ಲ ಎಂದ ಪೊಲೀಸರು

15-06-22 03:15 pm       HK News Desk   ಕರಾವಳಿ

​​​​​ಪ್ರವಾದಿ ನಿಂದನೆಯ ನೆಪದಲ್ಲಿ ದೇಶಾದ್ಯಂತ ಹಿಂಸಾಚಾರ ನಡೆಸಿರುವುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಮಂಗಳೂರಿನ ಪಿವಿಎಸ್ ವೃತ್ತದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಯಾವುದೇ ಪ್ರತಿಭಟನೆಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಮಂಗಳೂರು, ಜೂನ್ 15: ಪ್ರವಾದಿ ನಿಂದನೆಯ ನೆಪದಲ್ಲಿ ದೇಶಾದ್ಯಂತ ಹಿಂಸಾಚಾರ ನಡೆಸಿರುವುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಕಾರ್ಯಕರ್ತರು ಮಂಗಳೂರಿನ ಪಿವಿಎಸ್ ವೃತ್ತದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಯಾವುದೇ ಪ್ರತಿಭಟನೆಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಜೂನ್ 16ರಂದು ಮಧ್ಯಾಹ್ನ 3 ಗಂಟೆಗೆ ಪ್ರತಿಭಟನಾ ಸಭೆ ನಡೆಸುವ ಬಗ್ಗೆ ಜಾಲತಾಣದಲ್ಲಿ ಮಾಹಿತಿ ಪ್ರಸಾರವಾಗುತ್ತಿರುವುದು ಕಂಡುಬಂದಿದೆ. ಆದರೆ ಈ ಕುರಿತು ಪೊಲೀಸ್ ಇಲಾಖೆಗೆ ಅಧಿಕೃತವಾಗಿ ಅನುಮತಿ ಕೋರಿಕೆ ಪತ್ರವನ್ನು ಸಲ್ಲಿಸಿರುವುದಿಲ್ಲ. ಆದಾಗ್ಯೂ ಹಾಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆ ದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಅನುಮತಿ ನೀಡುವುದಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದ ಹಲವೆಡೆ ಪ್ರವಾದಿ ನಿಂದನೆ ನೆಪದಲ್ಲಿ ಪ್ರತಿಭಟನೆ, ಹಿಂಸಾಚಾರಕ್ಕೆ ತಿರುಗಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಇದೇ ನೆಪವನ್ನು ಮುಂದಿಟ್ಟು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ನಾಯಕರು ದೇಶಾದ್ಯಂತ ಜೂನ್ 16ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದರು. ಮಂಗಳೂರಿನಲ್ಲಿ ಪಿವಿಎಸ್ ವೃತ್ತದ ಬಳಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿದೆ ಎನ್ನುವ ಮಾಹಿತಿಗಳಿವೆ.

Bajrang Dal to hold nationwide protest against violence over remarks against Prophet no permission in Mangalore to protest says Police Commissioner Shashi Kumar. The Vishva Hindu Parishad (VHP) announced on Tuesday that Bajrang Dal activists will hold a nationwide protest and on June 16 also submit a memorandum to President Ram Nath Kovind against the recent incidents of violence in Jharkhand, West Bengal, Jammu and Kashmir and some other parts of the country over remarks against Prophet Muhammad.