ಬ್ರೇಕಿಂಗ್ ನ್ಯೂಸ್
16-06-22 08:03 pm Mangalore Correspondent ಕರಾವಳಿ
ಉಳ್ಳಾಲ, ಜೂ.16 : ಮುನ್ನೂರು ಗ್ರಾಮದ ಭಂಡಾರಬೈಲು ಎಂಬಲ್ಲಿ ರಸ್ತೆ ಬದಿಯಲ್ಲೇ ತ್ಯಾಜ್ಯದ ರಾಶಿ ಸುರಿಯುತ್ತಿದ್ದು, ತ್ಯಾಜ್ಯ ಸುರಿಯುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಗ್ರಾಪಂ ಅಧ್ಯಕ್ಷರನ್ನ ಗ್ರಾಮಸ್ಥರು ತರಾಟೆಗೆ ತೆಗೆದ ಘಟನೆ ನಡೆದಿದೆ.
ಭಂಡಾರ ಬೈಲು ಕಾರಣೀಕದ ಪಂಜಂದಾಯ ದೈವಸ್ಥಾನದ ಬಳಿಯ ರಸ್ತೆ ಅಂಚಲ್ಲೇ ಭಾರೀ ಪ್ರಮಾಣದಲ್ಲಿ ಗಬ್ಬು ತ್ಯಾಜ್ಯವನ್ನ ಸುರಿಯಲಾಗುತ್ತಿದೆ. ಹತ್ತಿರದಲ್ಲೇ ಮುನ್ನೂರು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕವಿದ್ದರೂ ಅದು ನಾದುರಸ್ತಿಯಲ್ಲಿದ್ದು ನಿಷ್ಕ್ರಿಯವಾಗಿದೆ.


ಗುರುವಾರ ನೆರೆಯ ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯವನ್ನು ಪಿಕ್ ಅಪ್ ವಾಹನದಲ್ಲಿ ತಂದು ಸುರಿದ ವೇಳೆ ಗ್ರಾಮಸ್ಥರು ವಾಹನ ಚಾಲಕನಿಗೆ ಘೆರಾವ್ ಹಾಕಿದ್ದಾರೆ. ಆದರೆ ಚಾಲಕನು ಮುನ್ನೂರು ಪಂಚಾಯತ್ ಅನುಮತಿ ಮೇರೆಗೆ ಕಸ ತಂದು ಸುರಿದಿರುವುದಾಗಿ ಹೇಳಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಕೆರಳಿದ ಗ್ರಾಮಸ್ಥರು ಗ್ರಾ.ಪಂ ಕಚೇರಿಗೆ ತೆರಳಿ ಪಂಚಾಯತ್ ಅಧ್ಯಕ್ಷ ವಿಲ್ಫ್ರೆಡ್ ಡಿ ಸೋಜ ಅವರನ್ನೇ ತರಾಟೆಗೆ ತೆಗೆದಿದ್ದಾರೆ. ಗ್ರಾಮಸ್ಥರನ್ನ ಉದ್ದೇಶಿಸಿ ಮಾತನಾಡಿದ ವಿಲ್ಫ್ರೆಡ್ ಅವರು ರಸ್ತೆ ಬದಿಯಲ್ಲಿ ತ್ಯಾಜ್ಯ ಸುರಿಯುವ ವಿಚಾರ ತನ್ನ ಗಮನಕ್ಕೆ ಬಂದಿಲ್ಲ. ರಸ್ತೆ ಬದಿ ರಾಶಿ ಬಿದ್ದಿರುವ ತ್ಯಾಜ್ಯವನ್ನ ಶೀಘ್ರ ವಿಲೇವಾರಿ ಮಾಡುತ್ತೇವೆ. ಸಿಸಿಟಿವಿ ದಾಖಲೆ ಪರಿಶೀಲಿಸಿ ಯಾರು ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದಿದ್ದಾರೋ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಮಜಾಯಿಷಿ ನೀಡಿದರು.


ಗ್ರಾಮದಲ್ಲಿ 15,000 ದಷ್ಟು ಜನಸಂಖ್ಯೆ ಇದೆ. ಕೆಲ ಗ್ರಾಮಸ್ಥರು ತಮ್ಮ ಮನೆಯಲ್ಲೇ ತ್ಯಾಜ್ಯ ವಿಲೇವಾರಿ ಮಾಡಲು ವ್ಯವಸ್ಥೆ ಇದ್ದರೂ ಕಸದ ವಾಹನವನ್ನೇ ಅವಲಂಬಿತವಾಗಿದ್ದಾರೆ. ಮಂಗಳೂರಿನ ವಿಲೇವಾರಿ ಘಟಕಕ್ಕೆ ತ್ಯಾಜ್ಯ ರವಾನಿಸಲು ತಾಂತ್ರಿಕವಾಗಿ ಅಡಚಣೆ ಉಂಟಾಗಿದೆ. ಶಾಸಕ ಯು.ಟಿ ಖಾದರ್ ಅವರ ಮಧ್ಯಸ್ಥಿಕೆಯಲ್ಲಿ ಎಲ್ಲವೂ ಸರಿಹೋಗಲಿದ್ದು ಮತ್ತೆ ಸಮರ್ಪಕವಾಗಿ ತ್ಯಾಜ್ಯ ನಿರ್ವಹಣೆ ಮಾಡಲಿದ್ದೇವೆ. ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿಗೆಂದೇ ಈಗಾಗಲೇ ಭಂಡಾರಬೈಲು ಪರಿಸರದಲ್ಲಿ ಒಂದು ಎಕರೆ ಜಮೀನು ಮಂಜೂರಾಗಿದ್ದು ವಿಲೇವಾರಿ ಘಟಕ ಶೀಘ್ರವೇ ಆರಂಭಗೊಳ್ಳಲಿದ್ದು ನಂತರ ತ್ಯಾಜ್ಯ ನಿರ್ವಹಣೆಯ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದು ವಿಲ್ಫ್ರೆಡ್ ಡಿಸೋಜ ಹೇಳಿದ್ದಾರೆ.
Mangalore Residents slams Munnuru gram panchayat officials for tons of garbage on main road.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm