ಬ್ರೇಕಿಂಗ್ ನ್ಯೂಸ್
20-06-22 03:40 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಹಿಜಾಬ್ ವಿವಾದ ಏರ್ಪಟ್ಟು ತರಗತಿಗೆ ಹಾಜರಾಗದೆ ಪಟ್ಟು ಹಿಡಿದಿದ್ದ ಐವರು ವಿದ್ಯಾರ್ಥಿನಿಯರು ಹಂಪನಕಟ್ಟೆ ವಿಶ್ವವಿದ್ಯಾನಿಲಯ ಕಾಲೇಜಿನಿಂದ ಬೇರೆ ಕಾಲೇಜಿಗೆ ತೆರಳಲು ವರ್ಗಾವಣೆ ಪ್ರಮಾಣಪತ್ರ ಕೇಳಿದ್ದಾರೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಐವರು ವಿದ್ಯಾರ್ಥಿನಿಯರು ತಮಗೆ ಟಿಸಿ ಕೊಡುವಂತೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿನಿಯರು ಟಿಸಿ ಕೇಳಿದ್ದನ್ನು ಕಾಲೇಜಿನ ಪ್ರಾಂಶುಪಾಲೆ ಅನಸೂಯ ರೈ ದೃಢಪಡಿಸಿದ್ದಾರೆ. ಅಲ್ಲದೆ, ವರ್ಗಾವಣೆ ಪತ್ರ ಕೇಳಿರುವುದರಲ್ಲಿ ಸ್ವಲ್ಪ ಕರೆಕ್ಷನ್ ಇದೆ, ಅದನ್ನು ಸರಿ ಮಾಡಿಕೊಳ್ಳಲು ಹೇಳಿದ್ದೇನೆ. ಸರಿಪಡಿಸಿ ಬಂದ ಕೂಡಲೇ ವರ್ಗಾವಣೆ ಪತ್ರ ನೀಡುವ ಬಗ್ಗೆ ನಿರ್ಧರಿಸುವುದಾಗಿ ತಿಳಿಸಿದ್ದಾರೆ. ಇತ್ತೀಚೆಗೆ ಕಾಲೇಜಿನ ಆಡಳಿತದ ಹಿಜಾಬ್ ನಿರ್ಧಾರವನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸುದ್ದಿಗೋಷ್ಟಿ ನಡೆಸಿದ್ದರು. ವಿದ್ಯಾರ್ಥಿನಿಯರು ಕಾಲೇಜಿನ ವಿರುದ್ಧ ಮಾತನಾಡಿದ್ದಕ್ಕಾಗಿ ಪ್ರಾಂಶುಪಾಲರು ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಿದ್ದರು.
ಪದವಿ ಪರೀಕ್ಷೆಗಳ ಮೌಲ್ಯಮಾಪನ ನಡೆಯುತ್ತಿರುವ ಕಾರಣ ಸದ್ಯಕ್ಕೆ ಕಾಲೇಜಿನಲ್ಲಿ ತರಗತಿಗಳು ನಡೆಯುತ್ತಿಲ್ಲ. ಇದರ ಬದಲಿಗೆ ಕೆಲವು ತರಗತಿಗಳಿಗೆ ಆನ್ಲೈನ್ ಕ್ಲಾಸ್ ನಡೆಸಲಾಗುತ್ತಿದೆ. ಇದೇ ವೇಳೆ, ಪಿಯುಸಿ ಫಲಿತಾಂಶ ಬಂದಿರುವುದರಿಂದ ಪದವಿ ತರಗತಿಗಳಿಗೆ ಪ್ರವೇಶಾತಿಯನ್ನೂ ಮಾಡಲಾಗುತ್ತಿದೆ. ಇತ್ತೀಚೆಗೆ ಮಂಗಳೂರು ವಿವಿ ಕುಲಪತಿ ಪಿ.ಎಸ್.ಯಡಪಡಿತ್ತಾಯ, ಕಾಲೇಜಿನಲ್ಲಿ ಹಿಜಾಬ್ ಬಗ್ಗೆ ಸ್ಪಷ್ಟ ನಿಮಯಗಳಿದ್ದು ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ನಿಯಮ ಪಾಲಿಸಲು ಸಾಧ್ಯವಾಗದವರು ಬೇರೆ ಕಾಲೇಜಿಗೆ ತೆರಳುವುದಿದ್ದಲ್ಲಿ ಟಿಸಿ ಕೊಡಲು ವ್ಯವಸ್ಥೆ ಮಾಡಲಾಗುವುದು ಎಂದಿದ್ದರು.
ಈ ಹಿನ್ನೆಲೆಯಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಪಟ್ಟು ಹಿಡಿದು ಹೈಡ್ರಾಮಾ ನಡೆಸಿದ್ದ ಐವರು ವಿದ್ಯಾರ್ಥಿನಿಯರು ಇದೀಗ ಬೇರೆ ಕಾಲೇಜು ತೆರಳಲು ಟಿಸಿ ಕೇಳಿದ್ದಾರೆ ಎನ್ನಲಾಗುತ್ತಿದೆ. ಕಳೆದ ಮೇ 26ರಂದು ದಿಢೀರ್ ಆಗಿ ಕಾಲೇಜಿನ ಕ್ಯಾಂಪಸಿನಲ್ಲಿ ಒಂದಷ್ಟು ವಿದ್ಯಾರ್ಥಿಗಳು ಹಿಜಾಬ್ ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ದರು. ಆನಂತರ ವಿವಿಯ ಸಿಂಡಿಕೇಟ್ ಸಭೆಯಲ್ಲಿ ಹಿಜಾಬ್ ನಿಯಮ ಕಟ್ಟುನಿಟ್ಟು ಮಾಡಿ ವಿವಿಯಿಂದ ಸುತ್ತೋಲೆ ಕಳುಹಿಸಲಾಗಿತ್ತು.
Five Muslim girl students from the Mangalore University College at Hampanakatta here have asked for transfer certificates from the college administration after being denied permission to attend classes wearing hijab. Principal Anusuya Rai has confirmed that the five students have applied for transfer certificates to join other colleges. However, they are being asked to submit another letter making certain corrections. The college management will take a call on issuing the certificates once the girls submit the letters.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm