ಬ್ರೇಕಿಂಗ್ ನ್ಯೂಸ್
20-06-22 04:12 pm Mangaluru Correspondent ಕರಾವಳಿ
ಉಳ್ಳಾಲ, ಜೂ.20: ರೈಲ್ವೇ ನೌಕರರಿಗೆ ನಕಲಿ ವೈದ್ಯಕೀಯ ಫಿಟ್ನೆಸ್ ಸರ್ಟಿಫಿಕೇಟ್ ನೀಡಿದ ಪ್ರಕರಣದಲ್ಲಿ ಸಿಬಿಐ ದಾಳಿಗೀಡಾಗಿ ಬಂಧಿತನಾಗಿದ್ದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಬಳಿಯ ಹಾಸ್ಪಿಟಲ್ ಫಾರ್ಮಸಿಸ್ಟ್ ವಿಜಯನ್ ವಿ.ಎ. ಎಂಬವರು ತೊಕ್ಕೊಟ್ಟಿನ ರೈಲ್ವೇ ಹಳಿಯಲ್ಲಿ ಶಂಕಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಮಂಗಳೂರು ಕೇಂದ್ರವಾಗಿಟ್ಟು ರೈಲ್ವೇ ನೌಕರರಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ಒದಗಿಸುತ್ತಿದ್ದ ಜಾಲವೊಂದನ್ನು ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಭೇದಿಸಿದ್ದರು. ಕಳೆದ ವಾರ ಸದ್ದಿಲ್ಲದೆ ದಾಳಿ ನಡೆಸಿ ಒಬ್ಬರು ವೈದ್ಯರು ಸೇರಿದಂತೆ ಮಂಗಳೂರಿನ ಮೂವರನ್ನು ಅಧಿಕಾರಿಗಳು ಬಂಧಿಸಿದ್ದರು. ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದ ಬಳಿಯಿರುವ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ವೈದ್ಯಕೀಯ ಅಧೀಕ್ಷಕ ಸೇರಿ ಮೂವರನ್ನು ಬಂಧಿಸಿದ್ದ ಮಾಹಿತಿಗಳಿದ್ದವು.
ಆರೋಗ್ಯ ಕೇಂದ್ರದ ಹೆಚ್ಚುವರಿ ಮುಖ್ಯ ವೈದ್ಯಕೀಯ ಅಧೀಕ್ಷಕ ಡಾ.ಶಿವಶಂಕರ ಮೂರ್ತಿ, ಔಷಧಾಲಯದ ಅಧಿಕಾರಿ ವಿಜಯನ್ ವಿ.ಎ. ಮತ್ತು ಇವರಿಗೆ ದಲ್ಲಾಳಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರಿನ ಇಬ್ರಾಹಿಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು.
ಪ್ರಕರಣದಲ್ಲಿ ಸಿಬಿಐ ವಶವಾಗಿದ್ದ ಪ್ರಮುಖ ಆರೋಪಿ ವಿಜಯನ್ ವಿ.ಎ ಅವರು ಇಂದು ಮಧ್ಯಾಹ್ನ ತೊಕ್ಕೊಟ್ಟು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಬಡಿದು ಸಾವನ್ನಪ್ಪಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ವಿಜಯನ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದ್ದರೂ ಪೊಲೀಸರ ತನಿಖೆಯಿಂದಷ್ಟೇ ಸತ್ಯಾಂಶ ಹೊರಬೀಳಲಿದೆ. ಘಟನಾ ಸ್ಥಳಕ್ಕೆ ರೈಲ್ವೇ ಮತ್ತು ಉಳ್ಳಾಲ ಪೊಲೀಸರು ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ರೈಲು ಬಡಿದು ಸಾವನ್ನಪ್ಪಿದ ರೀತಿ ಮೃತದೇಹ ಹಳಿಯ ಪಕ್ಕದಲ್ಲಿ ಕಂಡುಬಂದಿದ್ದು ಆತ್ಮಹತ್ಯೆ ಯತ್ನಕ್ಕೊಳಪಟ್ಟು ರೈಲು ತಾಗಿ ದೂರಕ್ಕೆ ತಳ್ಳಲ್ಪಟ್ಟಿದ್ದಾರೋ ಅಥವಾ ಯಾರೋ ಕೊಲೆ ಮಾಡುವ ಉದ್ದೇಶದಿಂದ ರೈಲು ಬರುತ್ತಿದ್ದಾಗ ತಳ್ಳಿದ್ದಾರೆಯೇ ಎನ್ನುವ ಶಂಕೆ ವ್ಯಕ್ತವಾಗಿದೆ. ಆತನ ಜೇಬಿನಲ್ಲಿ 500 ರೂ. ಮೌಲ್ಯದ ಕಂತೆ ನೋಟುಗಳಿದ್ದು ಹೇಗೆ ಸಾವು ಸಂಭವಿಸಿದೆ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Mangalore railway health pharmacist Vijayan found dead near under mysterious circumstances near railway bridge at thokottu. Vijayan was taken to custody by CBI officers who raided Railway Health Unit recently. The Central Bureau of Investigation (CBI)raided the Railway Health Unit near Mangaluru Central station and arrested three individuals including the Additional Chief Medical Superintendent for their alleged involvement in a fake medical certificate scam. According to sources, three individuals, Additional Chief Medical Superintendent, Dr Shiva Shankar Murthy, pharmacist Vijayan V A and broker Ibrahim were arrested by the CBI. A huge CBI team is still carrying out raids inside the health unit. A total of 1500 pages of documents have been seized by CBI officers in this connection.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm