ಬ್ರೇಕಿಂಗ್ ನ್ಯೂಸ್
22-06-22 06:52 pm Mangalore Correspondent ಕರಾವಳಿ
ಉಳ್ಳಾಲ, ಜೂ.22 : 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಸತತವಾಗಿ ಗೈರು ಹಾಜರಾಗಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಜಯಂತ್ ಶೆಟ್ಟಿ ವಿರುದ್ಧ ಮಂಗಳೂರಿನ ಅಡಿಷನಲ್ ಸೀನಿಯರ್ ಸಿವಿಲ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಸಾಮಾಜಿಕ ಕಾರ್ಯಕರ್ತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಕಬೀರ್ ಉಳ್ಳಾಲ್ 14 ವರ್ಷಗಳ ಹಿಂದೆ ಹೂಡಿದ ಖಾಸಗಿ ದಾವೆಯೊಂದಕ್ಕೆ ಸಂಬಂಧಿಸಿದಂತೆ ಜಯಂತ್ ಶೆಟ್ಟಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡ ಕಾರಣಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

15 ವರ್ಷಗಳ ಹಿಂದೆ ರೌಡಿ ನಿಗ್ರಹದಳದ ಮುಖ್ಯಸ್ಥರಾಗಿದ್ದ ಇನ್ಸ್ ಪೆಕ್ಟರ್ ಜಯಂತ್ ಶೆಟ್ಟಿ ಮತ್ತವರ ಸಿಬ್ಬಂದಿಗಳು ಉಳ್ಳಾಲ ಪರಿಸರದಲ್ಲಿ ದಾಳಿ ನಡೆಸಿ ಅಮಾಯಕರನ್ನು ಬಂಧಿಸಿದ್ದರು. ಪೊಲೀಸರ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟ ನಡೆಸಿದ್ದಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಲಾಗಿತ್ತು. 2008ರಲ್ಲಿ ಉಳ್ಳಾಲದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿ ನನ್ನನ್ನು ಪೊಲೀಸರು ಬಂಧಿಸಿ, ಬಳ್ಳಾರಿ ಜೈಲಿಗೆ ತಳ್ಳಿದ್ದರು. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡು ಜಯಂತ್ ಶೆಟ್ಟಿ ಮತ್ತು ಉಳ್ಳಾಲ ಪಿಎಸ್ಐ ಶಿವಪ್ರಕಾಶ್ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾಗಿ ಕಬೀರ್ ಉಳ್ಳಾಲ್ ತಿಳಿಸಿದ್ದಾರೆ.

ಕೋರ್ಟಿನಲ್ಲಿ ಸತತ ಹೋರಾಟ ನಡೆಸಿದ ಫಲವಾಗಿ ಶಿವಪ್ರಕಾಶ್ ಜಾಮೀನು ಪಡೆದರೆ, ಜಯಂತ್ ಶೆಟ್ಟಿ ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡಿದ್ದರು. ಪದೇ ಪದೇ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದರೂ, ಬರದೇ ಇರುವುದರಿಂದ ಜೂ.20ರಂದು ಮಂಗಳೂರಿನ ನ್ಯಾಯಾಲಯ ಜಯಂತ್ ಶೆಟ್ಟಿ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ. ದೂರುದಾರ ಪರವಾಗಿ ಹಿರಿಯ ನ್ಯಾಯವಾದಿ ಎಸ್.ಎಸ್. ಖಾಝಿ ವಾದಿಸಿದ್ದರು.
Mangalore Court issues non bailable warrant against former cop Jayanth Shetty in Kabeer Ullal case. in a 14-year-old case for repeatedly skipping appearing in court despite summons. The case pertains to a private complaint filed by activist Kabeer Ullal in 2008 when the officer was serving as the head of anti-rowdy squad. Kabeer alleged Jayanth Shetty and other police personnel used to target innocent people from Ullal.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 12:42 pm
HK News Staffer
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm