ಬ್ರೇಕಿಂಗ್ ನ್ಯೂಸ್
24-06-22 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ನಾರಾಯಣ ಗುರು, ಕುವೆಂಪು, ಬಾಬಾ ಸಾಹೇಬ್ ಅಂಬೇಡ್ಕರ್, ಕಯ್ಯಾರ ಕಿಞ್ಞಣ್ಣ ರೈ ಮುಂತಾದ ಖ್ಯಾತನಾಮರನ್ನು ಅವಮಾನಿಸಿದ್ದಾರೆಂಬ ಆರೋಪಕ್ಕೀಡಾಗಿರುವ ರೋಹಿತ್ ಚಕ್ರತೀರ್ಥ ಅವರಿಗೆ ಮಂಗಳೂರಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆಯಲ್ಲಿ ನಾಗರಿಕ ಸನ್ಮಾನ ಏರ್ಪಡಿಸಿರುವುದು ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಪತಿ ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿಕೊಂಡಿರುವುದಕ್ಕೆ ಸಮಾನ ಮನಸ್ಕ 'ದೇಶಪ್ರೇಮಿ ಸಂಘಟನೆಗಳ ಒಕ್ಕೂಟ' ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಕಾರ್ಯಕ್ರಮ ರದ್ದುಪಡಿಸಲು ಆಗ್ರಹಿಸಿದೆ. ಇಲ್ಲದಿದ್ದರೆ ಸಮಾನ ಮನಸ್ಕ ಸಂಘಟನೆಗಳು, ಕಾರ್ಯಕರ್ತರು ಬೃಹತ್ ಮೆರವಣಿಗೆಯಲ್ಲಿ ತೆರಳಿ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ನಾಡಿನ ಇತಿಹಾಸವನ್ನು ವಿಕೃತವಾಗಿ ತಿರುಚಲು, ಶ್ರೇಣೀಕೃತ ಜಾತಿ ಶ್ರೇಷ್ಠತೆಯನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಿರುವ ರೋಹಿತ್ ಚಕ್ರತೀರ್ಥ ವಿರುದ್ದ ಕರ್ನಾಟಕದ ಉದ್ದಗಲಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಾರಾಯಣ ಗುರು, ಕಯ್ಯಾರ ಕಿಞ್ಞಣ್ಣ ರೈಗಳ ಮಹತ್ವವನ್ನು ಪಠ್ಯಪುಸ್ತಕದಲ್ಲಿ ಗೌಣಗೊಳಿಸಲು ಯತ್ನಿಸಿರುವುದು ಕರಾವಳಿ ಜಿಲ್ಲೆಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಸೇವಾಂಜಲಿ ಟ್ರಸ್ಟ್ ಅಡಿ ಮಂಗಳೂರಿನಲ್ಲಿ ಚಕ್ರತೀರ್ಥಗೆ ನಾಗರಿಕ ಸನ್ಮಾನ ಏರ್ಪಡಿಸಿರುವುದು ಖಂಡನೀಯ. ಇದಲ್ಲದೆ, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲ ಕುಲಪತಿಗಳು ವಹಿಸುತ್ತಿರುವುದು ಮಂಗಳೂರಿನ ನಾಗರಿಕರು ತಲೆತಗ್ಗಿಸುವಂತೆ ಮಾಡಿದೆ. ಕುಲಪತಿಗಳು ಚಕ್ರತೀರ್ಥ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು, ನಾಗರಿಕ ಸನ್ಮಾನವನ್ನು ಆಯೋಜಕರು ರದ್ದುಗೊಳಿಸಬೇಕು ಎಂದು ಶುಕ್ರವಾರ ನಗರದ ವಿಕಾಸ ಕಚೇರಿಯಲ್ಲಿ ನಡೆದ 'ದೇಶಪ್ರೇಮಿ ಸಂಘಟನೆಗಳ ಒಕ್ಕೂಟ'ದ ತುರ್ತು ಸಭೆಯಲ್ಲಿ ಆಗ್ರಹಿಸಲಾಗಿದೆ ಎಂದು ಈ ಕುರಿತ ಪ್ರಕಟಣೆಯಲ್ಲಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
ಕಾರ್ಯಕ್ರಮ ರದ್ದುಗೊಳಿಸಲು ಒತ್ತಾಯಿಸಿ ಜೂನ್ 25ರ ಸಂಜೆ 4.30 ಕ್ಕೆ ಸಿಟಿ ಸೆಂಟರ್ ಮಾಲ್ ಸಮೀಪ ಸಮಾನ ಮನಸ್ಕ ಸಂಘಟನೆಗಳು, ನಾಗರಿಕರು ಒಟ್ಟು ಸೇರಿ ಅಲ್ಲಿಂದ ಕಾರ್ಯಕ್ರಮ ನಡೆಯುವ ಡೊಂಗರಕೇರಿ ಕೆನರಾ ಹೈಸ್ಕೂಲ್ ಗೆ ಮೆರವಣಿಗೆಯಲ್ಲಿ ತೆರಳಲಾಗುವುದು. ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಂಡಿಕೇಟ್ ಸದಸ್ಯ ಎಮ್ ಜಿ ಹೆಗ್ಡೆ, ದಲಿತ ನಾಯಕ ಎಂ ದೇವದಾಸ್, ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್, ಸಿಪಿಐಎಂ ಮುಖಂಡರಾದ ಯಾದವ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ಸಾಲ್ಯಾನ್, ಸಿಐಟಿಯು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಸಮರ್ಥ್ ಭಟ್, ಕಾರ್ಪೊರೇಟರ್ ಲತೀಫ್ ಕಂದಕ್, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಸಂತೋಷ್ ಬಜಾಲ್, ಮನೋಜ್ ವಾಮಂಜೂರು, ಯುವ ಕಾಂಗ್ರೆಸ್ ನ ಇಸ್ಮಾಯಿಲ್, ಫಯಾಜ್ ಜೆಡಿಎಸ್ ಮುಂದಾಳುಗಳಾದ ಸುಮತಿ ಎಸ್ ಹೆಗ್ಡೆ, ಅಲ್ತಾಫ್ ತುಂಬೆ ಸಭೆಯಲ್ಲಿ ಹಾಜರಿದ್ದರು.
DYFI threatens of Gherao program of Rohith Chakrathirtha felicitatation program in Mangalore. Political and social outfits of Mangalore condemned a programme slated to be organised by the Sevanjali Charitable Trust to felicitate former textbook revision committee head Rohith Chakrathirtha on June 25. The outfits also criticised the probable presence of Vice Chancellor of Mangalore University P S Yadapadithaya as the chief guest of the event.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm