ಬಾಬ್ರಿ ತೀರ್ಪು ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ, ಐವರು ಪೊಲೀಸರ ವಶಕ್ಕೆ

30-09-20 05:14 pm       Mangalore Correspondent   ಕರಾವಳಿ

ಬಾಬ್ರಿ ಮಸ್ಜಿದ್ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮಂಗಳೂರು, ಸೆಪ್ಟಂಬರ್ 30: ಬಾಬ್ರಿ ಮಸ್ಜಿದ್ ಧ್ವಂಸ ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿ ವಿಶೇಷ ಸಿಬಿಐ ನ್ಯಾಯಾಲಯ ನೀಡಿರುವ ತೀರ್ಪನ್ನು ಖಂಡಿಸಿ ಮಂಗಳೂರಿನಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಎದುರು ಸೇರಿದ ಎಸ್ ಡಿ ಪಿ ಐ ಕಾರ್ಯಕರ್ತರು ಕೇಂದ್ರ ಸರಕಾರ ಹಾಗು ಸಿ ಬಿ ಐ ನ್ಯಾಯಾಲಯದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ಈ ದೇಶ ಪ್ರಪಂಚದ ಎದುರು ತಲೆ ತಗ್ಗಿಸೋ ತೀರ್ಪನ್ನು ಲಕ್ನೋ ಕೋರ್ಟ್ ನೀಡಿದೆ. ಭಾರತದಲ್ಲಿ ನಿಜವಾಗಿಯೂ ಪ್ರಜಾಪ್ರಭುತ್ವ ಇದೆಯಾ ಅನ್ನೋ ಸಂಶಯ ಮೂಡ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. 

ನ್ಯಾಯಾಲಯದಲ್ಲೂ ನ್ಯಾಯ ಸಿಗ್ತಿಲ್ಲ ಅನ್ನೋದಾದ್ರೆ ಈ ದೇಶ ಎತ್ತ ಕಡೆ ಸಾಗುತ್ತಿದೆ. ಕೋರ್ಟಿನ ಇವತ್ತಿನ ತೀರ್ಪು ದೇಶದಲ್ಲಿ ನ್ಯಾಯ ಉಳಿದಿಲ್ಲ ಅನ್ನೋದನ್ನ ಸಾಬೀತು ಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅನುಮತಿ ಪಡೆಯದೆ ಏಕಾಏಕಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಕಾರ್ಪೊರೇಟರ್ ಮುನೀಬ್ ಬೆಂಗ್ರೆ ,  ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದರು.

video