ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಎತ್ತಂಗಡಿ ! ಡ್ರಗ್ ತನಿಖೆಯೇ ಮುಳುವಾಯ್ತೇ ?! 

30-09-20 11:00 pm       Mangaluru Correspondent   ಕರಾವಳಿ

ನೂತನ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಮಂಗಳೂರು, ಸೆಪ್ಟಂಬರ್ 30: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರನ್ನು ದಿಢೀರ್ ಆಗಿ ಎತ್ತಂಗಡಿ ಮಾಡಲಾಗಿದೆ‌.‌ ಡ್ರಗ್ಸ್ ಪ್ರಕರಣದಲ್ಲಿ ಮುಂಬೈ, ಬೆಂಗಳೂರು ಸೇರಿ ಮೂಲಬೇರನ್ನೇ ಕೆದಕಲು ಜಾಲಾಡುತ್ತಿರುವ ಸಿಸಿಬಿ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ಆಗಿ ವರ್ಗಾವಣೆ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ. 

ಶಿವಪ್ರಕಾಶ ನಾಯ್ಕ್ ಅವರನ್ನು ಸಿಸಿಬಿ ಇನ್ಸ್ ಪೆಕ್ಟರ್ ಹುದ್ದೆಯಿಂದ ಹಲ್ಲಿಲ್ಲದ ಹಾವು ಎನಿಸ್ಕೊಂಡಿರುವ ಲೋಕಾಯುಕ್ತಕ್ಕೆ ವರ್ಗ ಮಾಡಲಾಗಿದೆ. 

ನೂತನ ಸಿಸಿಬಿ ಇನ್ಸ್ ಪೆಕ್ಟರ್ ಆಗಿ ಉಡುಪಿ ಜಿಲ್ಲೆಯ ಕಾಪು ಠಾಣೆಯ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್, ಅಂದೇ ಮಂಗಳೂರು ಸಿಸಿಬಿಗೆ ಬರಲು ಲಾಬಿ ನಡೆಸಿದ್ದರು. 

ಇದೀಗ ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ತೀವ್ರಗೊಂಡಿರುವಾಗಲೇ ಸಿಸಿಬಿ ಇನ್ಸ್ ಪೆಕ್ಟರನ್ನು ಏಕಾಏಕಿ ವರ್ಗಾವಣೆಗೊಳಿಸಿದ್ದರ ಹಿಂದೆ ಕಾಣದ ಕೈಗಳ ಕೈವಾಡ ಇರಬಹುದೇ ಎನ್ನುವ ಅನುಮಾನ ಮೂಡಿದೆ.