ಬ್ರೇಕಿಂಗ್ ನ್ಯೂಸ್
29-06-22 06:18 pm Mangalore Correspondent ಕರಾವಳಿ
ಉಳ್ಳಾಲ, ಜೂ.29 : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಚೆಂಬುಗುಡ್ಡೆ ಅಂಬೇಡ್ಕರ್ ನಗರದ ಭಾಸ್ಕರ್ ಎಂಬವರ ಮನೆಯ ಹಂಚಿನ ಛಾವಣಿ ಕುಸಿದು ಬಿದ್ದ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಕೋಣೆಯಲ್ಲಿ ಮಲಗಿದ್ದ ಭಾಸ್ಕರ್ ದಂಪತಿ ಅದೃಷ್ಟದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಛಾವಣಿ ಕುಸಿದು ಬಿದ್ದ ವೇಳೆ ಭಾಸ್ಕರ್ ಮತ್ತು ಅವರ ಪತ್ನಿ ಕೋಣೆಯೊಳಗೆ ಮಲಗಿದ್ದು ಮಂಚದ ಪಕ್ಕಕ್ಕೆ ಹಂಚಿನ ರಾಶಿಯೇ ಬಿದ್ದಿದ್ದು ಭಾಸ್ಕರ್ ಅವರ ಕಾಲಿಗೆ ಗಾಯವಾಗಿದೆ. ದಂಪತಿ ಕೂದಲೆಲೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಅವರ ಇಬ್ಬರು ಮಕ್ಕಳೂ ಅಪಾಯದಿಂದ ಪಾರಾಗಿದ್ದಾರೆ.


ಭಾಸ್ಕರ್ ಅವರದ್ದು ತೀರಾ ಬಡ ಕುಟುಂಬವಾಗಿದ್ದು ವಾಸವಿರಲು ಮನೆಯೇ ಇಲ್ಲದಂತಾಗಿದೆ. ಘಟನಾ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿದು ಬಿದ್ದರೆ ಮನೆಯ ಅಗತ್ಯ ಸಾಮಗ್ರಿಗಳು ಹಾಳಾಗಿರುತ್ತದೆ. ಈ ಕಾರಣದಿಂದ ತುರ್ತು ಪರಿಹಾರ ಮೊತ್ತವನ್ನು ಸರ್ಕಾರ ನೀಡಬೇಕು. ಬಳಿಕ ಇಂಜಿನಿಯರ್ ಪರಿಶೀಲನೆ ನಡೆಸಿ ಪರಿಹಾರ ಮೊತ್ತ ನಿಗದಿ ಪಡಿಸಿ ಒದಗಿಸಬೇಕು. ಆದಷ್ಟು ಬೇಗ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು.


ಭಾಸ್ಕರ್ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿ ರಾಜೀವ್ ಗಾಂಧಿ ವಸತಿ ಯೋಜನೆ ಅಡಿಯಲ್ಲಿ ಮನೆ ಒದಗಿಸುವ ಬಗ್ಗೆ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಗುರುಪ್ರಸಾದ್ ಹೇಳಿದ್ದಾರೆ. ಸ್ಥಳಕ್ಕೆ ಉಳ್ಳಾಲ ನಗರ ಪೌರಾಯುಕ್ತೆ ವಿದ್ಯಾ ಕಾಳೆ ಭೇಟಿ ನೀಡಿದ್ದಾರೆ.
Heavy rain in Mangalore, roof collapses in Chembugudde, couple saved from danger.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm