ಬ್ರೇಕಿಂಗ್ ನ್ಯೂಸ್
29-06-22 09:52 pm Mangalore Correspondent ಕರಾವಳಿ
ಮಂಗಳೂರು, ಜೂ.29 : ಉಳ್ಳಾಲದ ಬಟ್ಟಂಪಾಡಿ ಕಡಲಲ್ಲಿ ಮುಳುಗಿರುವ ಎಂವಿ ಪ್ರಿನ್ಸೆಸ್ ಮಿರಾಲ್ ಹಡಗಿನಲ್ಲಿ ಇದುವರೆಗೆ ಯಾವುದೇ ರೀತಿಯ ತೈಲ ಸೋರಿಕೆ ಕಂಡು ಬಂದಿರುವುದಿಲ್ಲ. ಕರಾವಳಿ ರಕ್ಷಣಾ ಪಡೆಗೆ ಸೇರಿದ ಮೂರು ವಿಶೇಷ ನೌಕೆ ಅಲ್ಲದೆ ಡೋರ್ನಿಯರ್ ವಿಮಾನದ ಮೂಲಕವೂ ಈ ಬಗ್ಗೆ ನಿರಂತರ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ದ.ಕ. ಜಿಲ್ಲಾಡಳಿತ ಮಾಹಿತಿ ನೀಡಿದೆ.
ಸಮುದ್ರದಲ್ಲಿ ತೈಲ ಸೋರಿಕೆಯಾದಲ್ಲಿ ನಿವಾರಣಾ ಕ್ರಮಗಳು, ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಸುರಕ್ಷತೆಗಳ ಬಗ್ಗೆ ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಅಣಕು ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, ಅಗತ್ಯ ಪರಿಕರಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲಾಗಿದೆ.
ನೌಕಾಯಾನ ಇಲಾಖೆಯ ಮಹಾನಿರ್ದೇಶಕರು, ಕರಾವಳಿ ಕಾವಲು ಪಡೆಯ ಕೇಂದ್ರ ಕಚೇರಿ ಹಾಗೂ ಪಶ್ಚಿಮ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿ, ಎಂಎಂಡಿ ಇಲಾಖೆಯ ಅಧಿಕಾರಿಗಳು, ನವಮಂಗಳೂರು ಬಂದರು ಪ್ರಾಧಿಕಾರ, ಸಂಬಂಧಿಸಿದರು ಹಾಗೂ ಹಡಗಿನ ಮಾಲೀಕರೊಂದಿಗೆ ಈ ಸಮಸ್ಯೆಯನ್ನು ಬಗೆಹರಿಸಲು ಕೈಗೊಳ್ಳಬೇಕಾದ ವಿಶೇಷ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಹಡಗಿನ ತೆರವಿಗೆ ಏಜೆನ್ಸಿಗಳನ್ನು ನಿಯೋಜಿಸುವ ಬಗ್ಗೆ ನೌಕಾಯಾನ ಇಲಾಖೆಯ ಮಹಾನಿರ್ದೇಶಕರು ಕ್ರಮ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಹಿಸಬೇಕಾದ ವಿಶೇಷ ಕ್ರಮಗಳ ಬಗ್ಗೆ ತಾಂತ್ರಿಕ ಪರಿಣತರು ಜಿಲ್ಲಾಡಳಿತಕ್ಕೆ ಮಾರ್ಗದರ್ಶನ ನೀಡುತ್ತಿದ್ದು, ಅದರಂತೆಯೂ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಹಡಗಿಗೆ ಸಂಬಂಧಿತ ವಿಷಯ ಹಾಗೂ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ನೌಕಾಯಾನ ಇಲಾಖೆಯ ಮಹಾನಿರ್ದೇಶಕರು, ಕರಾವಳಿ ರಕ್ಷಣಾ ಪಡೆ, ಎನ್‌ಎಂಪಿಎ, ಎಂಆರ್‌ಪಿಎಲ್ ಸೇರಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳು ಪ್ರತಿದಿನ ಸಂಜೆ 5 ಗಂಟೆಗೆ ವರ್ಚುವಲ್ ಮಾಧ್ಯಮದ ಮೂಲಕ ಸಭೆ ನಡೆಸುತ್ತಿದೆ. ಪರಿಸ್ಥಿತಿಗೆ ತಕ್ಕಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆಯಷ್ಟೇ ಸಣ್ಣ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದು ಉಳ್ಳಾಲ ಭಾಗದಲ್ಲಿ ಮೀನುಗಾರಿಕೆ ನಡೆಸಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿತ್ತು. ಇದೀಗ ಸಾರ್ವಜನಿಕರ ಕಡೆಯಿಂದ ಆಕ್ರೋಶ ಬರುತ್ತಲೇ ತೈಲ ಸೋರಿಕೆಯಾಗಿಲ್ಲ. ಹಡಗನ್ನು ತೆರವು ಮಾಡಲಾಗುತ್ತದೆ ಎಂದು ಪ್ರಕಟಣೆ ನೀಡಿದ್ದಾರೆ.
ಉಳ್ಳಾಲ ಕಡಲಲ್ಲಿ ಮುಳುಗಿದ ಸಿರಿಯನ್ ಹಡಗು ; 220 ಟನ್ ತೈಲ ಸೋರಿಕೆ ಭೀತಿ, ಸಮಸ್ಯೆ ಎದುರಿಸಲು ಜಿಲ್ಲಾಡಳಿತ ಸಿದ್ಧತೆ
ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ಹಡಗು ; ಕೋಸ್ಟ್ ಗಾರ್ಡ್ ನಿಂದ 15 ಸಿಬಂದಿ ರಕ್ಷಣೆ
Mangalore DC Rajendra Kumar now says there is no Oil pill from the ship, all action in waste. Indian Coast Guard had continued to monitor the situation around the grounded merchant ship MV Princess Miral of New Mangalore for any probable leakage of oil from the ship. The ship had sunk two days ago. The State administration along with other stakeholders is also coordinating for shore line cleanup in case of any oil spill.Constant surveillance had been undertaken by Coast Guard aircraft and ships in the area but unfortunately there is no any oil spill in the sea.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm