ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ, ಸರ್ಪ ಸಂಸ್ಕಾರ ಸೇವೆ

30-06-22 05:17 pm       HK News Desk   ಕರಾವಳಿ

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ಸುಬ್ರಹ್ಮಣ್ಯ, ಜೂನ್ 30 : ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವೆ ನೆರವೇರಿಸಿದರು.

ರಾಜ್ಯಪಾಲರ ಭೇಟಿ ಸಂದರ್ಭದಲ್ಲಿ ಇತರೇ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿತ್ತು. ಮಧ್ಯಾಹ್ನ ಕುಟುಂಬ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ದೇವಸ್ಥಾನದ ಹಾಗೂ ಜಿಲ್ಲಾಡಳಿತದ ವತಿಯಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ವಾಗತಿಸಿದರು. ಬಳಿಕ ಅವರು ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಕ್ಷೇತ್ರದ ಸಭಾಂಗಣದಲ್ಲಿ ಸಂವಾದ ನಡೆಸಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನವಾಣೆ, ಪುತ್ತೂರು ಎಸಿ ಗಿರೀಶ್ ನಂದನ್, ಕಡಬ ಇಒ ನವೀನ್ ಭಂಡಾರಿ, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ ಉಪಸ್ಥಿತರಿದ್ದರು.

Karnataka Governor Thawar Chand Gehlot visited the Kukke Sri Subramanya Temple, here on Thursday and offered Sarpa Samskara puja/seva.