ಮುಂದುವರಿದ ಮಳೆ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆ, ಕಾಲೇಜಿಗೆ ರಜೆ ಘೋಷಣೆ

30-06-22 07:24 pm       HK News Desk   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ‌‌ಯೂ (ಜುಲೈ 1) ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಂಗಳೂರು, ಜೂನ್ 30: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ‌‌ಯೂ (ಜುಲೈ 1) ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಜುಲೈ 1ರ ಬೆಳಗ್ಗೆ ವರೆಗೆ ನೀಡಲಾಗಿದ್ದರೂ, ಜಿಲ್ಲಾ ವಿಪತ್ತು ನಿರ್ವಹಣಾ ಪಡೆಯ ಮಾಹಿತಿ ಪ್ರಕಾರ ಆಗಿಂದಾಗ್ಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕ ಹಿತಾಸಕ್ತಿ ಮತ್ತು ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ನೀಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಹೇಳಿದ್ದಾರೆ. ‌

Continuous rains in Mangalore, schools and colleges declared holiday in Dakshina Kannada. : As incessant rain is likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Friday July 1 for all the educational institutions. The India Meteorological Department declared an orange alert in the district on Friday. Hence, the DC has declared a holiday for the educational institutions.