ಬ್ರೇಕಿಂಗ್ ನ್ಯೂಸ್
05-07-22 08:54 am Mangaluru Correspondent ಕರಾವಳಿ
ಮಂಗಳೂರು, ಜುಲೈ 5: ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ.
ಅಂಗನವಾಡಿಯಿಂದ ತೊಡಗಿ ಪ್ರಾಥಮಿಕ, ಪ್ರೌಢ, ಪಿಯು ಕಾಲೇಜು, ಪದವಿ, ಡಿಪ್ಲೊಮಾ, ಐಟಿಐ ಎಲ್ಲ ಮಾದರಿಯ ಶಿಕ್ಷಣ ಕೇಂದ್ರಗಳಿಗೂ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಮುಂಜಾಗ್ರತಾ ನೆಲೆಯಲ್ಲಿ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ ಎದುರಾಗಿದೆ. ಕುಮಾರಧಾರ, ನೇತ್ರಾವತಿ ನದಿಗಳು ತುಂಬಿ ಹರಿಯುತ್ತಿದ್ದು ನದೀ ದಡದ ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಸ್ನಾನಘಟ್ಟ ಮುಳುಗಡೆಯಾಗಿದ್ದು ಅಪಾಯದ ಮಟ್ಟ ತಲುಪಿದೆ. ಭಕ್ತರು ನದಿಯಲ್ಲಿ ಸ್ನಾನ ಮಾಡದಂತೆ ನೋಡಿಕೊಳ್ಳಲು ಸ್ಥಳದಲ್ಲಿ ಕಾವಲು ಸಿಬಂದಿ ನಿಯೋಜಿಸಲಾಗಿದೆ.
ಮಂಗಳೂರು ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು ಪ್ರವಾಹದ ರೀತಿ ಹರಿಯತೊಡಗಿದೆ. ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡಿದರು. ಕೊಟ್ಟಾರದಲ್ಲಿಯೂ ಹೆದ್ದಾರಿಗೆ ನೀರು ಬಂದಿದ್ದು ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.
As incessant rains are likely to lash the district, Dakshina Kannada deputy commissioner (DC) Dr K V Rajendra and Udupi DC Kurma Rao M declared a holiday on Tuesday July 5 for all the educational institutions. As heavy rains are expected to lash the district, the DC declared a holiday for the educational institutions on Tuesday. The holiday was declared keeping in mind the safety of students going to schools and colleges.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm