ಬ್ರೇಕಿಂಗ್ ನ್ಯೂಸ್
05-07-22 09:35 pm Mangalore Correspondent ಕರಾವಳಿ
ಉಳ್ಳಾಲ, ಜು.5: ನಿರಂತರ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ತೊಕ್ಕೊಟ್ಟು ಬಳಿಯ ಕಲ್ಲಾಪು ಪ್ರದೇಶ ಜಲಾವೃತವಾಗಿದ್ದು ಸುಮಾರು ಐವತ್ತಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ.
ಕಲ್ಲಾಪು ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ಯು.ಟಿ ಖಾದರ್, ಪ್ರಾಕೃತಿಕ ವಿಕೋಪ ಸಭೆ ನಡೆಸದ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಗರಂ ಆಗಿದ್ದಾರೆ. ಕಲ್ಲಾಪಿನ ಸುಮಾರು ಐವತ್ತಕ್ಕೂ ಹೆಚ್ಚಿನ ಮನೆಗಳು, ಸಭಾಂಗಣ, ವಾಣಿಜ್ಯ ಕಟ್ಟಡಗಳು ಜಲಾವೃತಗೊಂಡಿವೆ. ಪ್ರತೀ ವರ್ಷವೂ ಈ ಪ್ರದೇಶಗಳು ಮಳೆಗಾಲದಲ್ಲಿ ನೆರೆಗೆ ಜಲಾವೃತಗೊಳ್ಳುತ್ತದೆ.
ಸ್ಥಳೀಯರಾದ ಮಹಮ್ಮದ್ ತಯ್ಯುಬ್ ಹೇಳುವ ಪ್ರಕಾರ ಈ ಬಾರಿ ಇನ್ನೂ ನೆರೆ ಬಂದಿಲ್ಲ. ಅಸಮರ್ಪಕ ಚರಂಡಿಗಳಲ್ಲಿ ನೀರು ಹರಿಯದ ಪರಿಣಾಮ ಪ್ರದೇಶ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿ ಅಗಲೀಕರಣಗೊಂಡ ವೇಳೆ ಕಲ್ಲಾಪುವಿನ ರಸ್ತೆ ಬದಿಯಲ್ಲಿದ್ದ ರಾಜ ಕಾಲುವೆ ಮುಚ್ಚಲ್ಪಟ್ಟಿದ್ದು ಇದರಿಂದ ಕಲ್ಲಾಪು ಪ್ರದೇಶದಲ್ಲಿ ಮಳೆ ನೀರು ಹರಿಯದೆ ಕೃತಕ ನೆರೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯರು ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಅವರು ಅಲವತ್ತುಕೊಂಡಿದ್ದಾರೆ.
ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೆರ್ಮನ್ನೂರು ಗ್ರಾಮಕರಣಿಕೆ ಶ್ವೇತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ಮಾಡಿ ತಕ್ಷಣ ಹೆದ್ದಾರಿ ಬದಿಯ ರಾಜಕಾಲುವೆಯನ್ನ ಸರಿಪಡಿಸಲು ಸೂಚಿಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಕರಾವಳಿಯಲ್ಲಿ ಬಹಳಷ್ಟು ಸಮಸ್ಯೆಗಳು ಎದುರಾಗಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಪ್ರಾಕೃತಿಕ ವಿಕೋಪ ಸಭೆ ನಡೆಸಿಲ್ಲ. ನೆರೆ ಪೀಡಿತರ ರಕ್ಷಣೆಗೆ ಬೋಟ್ ಕೂಡ ಇಲ್ಲ, ಖಾಸಗಿ ಬೋಟ್ ನವರಿಗೆ ದುಡ್ಡು ಕೊಟ್ಟು ತರಿಸುವಂತಹ ಅನಿವಾರ್ಯತೆ ಇದ್ದು ಸಚಿವರು ಆದಷ್ಟು ಬೇಗನೆ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ಸ್ಥಳೀಯ ಕೌನ್ಸಿಲರ್ ರಾಜೇಶ್ ಯು.ಬಿ, ಸ್ಥಳೀಯರಾದ ಪುರುಷೋತ್ತಮ ಕಲ್ಲಾಪು ಇದ್ದರು.
Heavy rains in Mangaluru, Kalapu flooded with water in Ullal, MLA Khader visits spot
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm