ಬ್ರೇಕಿಂಗ್ ನ್ಯೂಸ್
08-07-22 03:48 pm Mangalore Correspondent ಕರಾವಳಿ
ಮಂಗಳೂರು, ಜುಲೈ 8 : ನಗರದ ಹೊರವಲಯದ ಅಡ್ಯಾರ್ ಕಣ್ಣೂರಿನ ಬಳ್ಳೂರುಗುಡ್ಡೆ ಎಂಬಲ್ಲಿ ಗುಡ್ಡ ಬಿರುಕು ಬಿಟ್ಟಿದ್ದು ಐದಾರು ಮನೆಗಳ ಮೇಲೆ ಕುಸಿದು ಬೀಳುವ ಆತಂಕ ಎದುರಾಗಿದೆ.
ರೈಲ್ವೇ ಹಳಿಯ ಪಕ್ಕದಲ್ಲೇ ಇರುವ ಗುಡ್ಡ ಭಾರೀ ಮಳೆಗೆ ಬಿರುಕು ಬಿಟ್ಟಿದ್ದು ಅಲ್ಲಿಯ ನಿವಾಸಿಗಳು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ. ಗುಡ್ಡದಲ್ಲಿ ಒತ್ತೊತ್ತಾಗಿ ಮನೆಗಳಿದ್ದು ಮೆಟ್ಟಿಲು ಇರುವಲ್ಲಿ ಮಣ್ಣು ಕುಸಿದು ಬಿದ್ದಿದೆ. ಅಬ್ದುಲ್ ರಹಮಾನ್ ಎಂಬವರ ಮನೆಯ ಸ್ಥಿತಿ ಈಗಲೋ ಆಗಲೋ ಅನ್ನುವಂತಿದೆ.


ಮಹಾನಗರ ಪಾಲಿಕೆಯ ಆಡಳಿತ ಸ್ಥಳದಲ್ಲಿ ಆತಂಕ ಎದುರಿಸುತ್ತಿರುವ ಐದು ಮನೆಗಳ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚನೆ ನೀಡಿದೆ. ಪಕ್ಕದ ಅಂಗನವಾಡಿ ಕಟ್ಟಡದಲ್ಲಿ ಇರುವಂತೆ ಸ್ಥಳೀಯ ಕಾರ್ಪೊರೇಟರ್ ಹೇಳಿದ್ದಾರಂತೆ. ಈ ನಡುವೆ, ಗುಡ್ಡ ಕುಸಿಯದಂತೆ ಬಿರುಕು ಬಿಟ್ಟಿರುವ ಜಾಗಕ್ಕೆ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಗುಡ್ಡ ಕುಸಿದ ಕೆಳಭಾಗದಲ್ಲಿರುವ ಮನೆಗಳ ನಿವಾಸಿಗಳು ಸಂಬಂಧಿಕರ ಮನೆಗಳಿಗೆ ತೆರಳಿ ಉಳಿದುಕೊಂಡಿದ್ದಾರೆ.


30 ವರ್ಷಗಳಿಗೂ ಹೆಚ್ಚು ಕಾಲದಿಂದ ಇದ್ದೇವೆ. ಈಗ ಇಂತಹ ಸ್ಥಿತಿ ಬಂದಿದೆ. ಈವರೆಗೂ ಗುಡ್ಡ ಕುಸಿದಿರಲಿಲ್ಲ. ಗುಡ್ಡ ಕುಸಿಯದಂತೆ ಇಲ್ಲಿ ತುರ್ತಾಗಿ ಕಾಂಕ್ರೀಟ್ ತಡೆಗೋಡೆ ಹಾಕಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಐದಾರು ಮನೆಗಳ ನಿವಾಸಿಗಳು ಅಪಾಯ ಭೀತಿಯಲ್ಲಿದ್ದು ತಾತ್ಕಾಲಿಕವಾಗಿ ಬೇರೆ ಕಡೆ ಉಳಿದುಕೊಂಡಿದ್ದಾರೆ. ಮಳೆ ತೀವ್ರಗೊಂಡರೆ ಮನೆಗಳು ಕುಸಿಯುವ ಸಾಧ್ಯತೆ ಇದೆ.
Mangalore Landslide fear in Adyar Kannur area, residents in trouble.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm