ಬ್ರೇಕಿಂಗ್ ನ್ಯೂಸ್
10-07-22 09:50 pm Mangalore Correspondent ಕರಾವಳಿ
ಮಂಗಳೂರು, ಜುಲೈ 10: ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಇರುವುದರಿಂದ ಸೋಮವಾರವೂ (ಜುಲೈ 11) ಅಂಗನವಾಡಿಯಿಂದ ಹಿಡಿದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಎಸ್ಸೆಸ್ಸೆಲ್ಸಿ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ. ಪಿಯುಸಿ, ಪದವಿ, ಸ್ನಾತಕೋತ್ತರ ಸೇರಿದಂತೆ ಇತರೇ ವೃತ್ತಿ ತರಬೇತಿ ಕೋರ್ಸುಗಳಿಗೆ ಸೋಮವಾರದಿಂದ ಕಾಲೇಜು ಆರಂಭಿಸಲು ಸೂಚಿಸಲಾಗಿದೆ.
ಅಲ್ಲದೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಈ ಬಾರಿ ಮಳೆಯ ಕಾರಣಕ್ಕೆ ಎಷ್ಟು ದಿನ ರಜೆ ನೀಡಲಾಗುತ್ತದೋ ಅದನ್ನು ಶನಿವಾರ ಪೂರ್ತಿ ತರಗತಿ ನಿರ್ವಹಿಸಿ ಮತ್ತು ದಸರಾ ರಜೆಗಳಂದು ಸರಿದೂಗಿಸುವಂತೆ ಜಿಲ್ಲಾಡಳಿತ ಆಯಾ ಶಾಲಾಡಳಿತಗಳಿಗೆ ಸೂಚಿಸಿದೆ. ಇದಲ್ಲದೆ, ಮುಂದಿನ ದಿನಗಳಲ್ಲಿ ರೆಡ್ ಅಲರ್ಟ್ ಕಾರಣಕ್ಕೆ ಜಿಲ್ಲೆಯಾದ್ಯಂತ ರಜೆ ನೀಡುವ ಬದಲು ಆಯಾ ಶಾಲೆ, ಕಾಲೇಜುಗಳ ವ್ಯಾಪ್ತಿಯಲ್ಲಿ ಮಳೆಯ ಪ್ರಮಾಣ ನೋಡಿಕೊಂಡು ರಜೆ ನೀಡಲು ಕ್ರಮ ವಹಿಸುವುದು, ಈ ಬಗ್ಗೆ ರಜೆ ನೀಡುವ ಅಧಿಕಾರವನ್ನು ಆಯಾ ಶಾಲೆಗಳ ಆಡಳಿತಕ್ಕೆ ವಹಿಸಲಾಗಿದೆ. ಶಾಲಾಡಳಿತ ಮಂಡಳಿಯವರು ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೂಚಿಸಿದ್ದಾರೆ.
ರೆಡ್ ಅಲರ್ಟ್ ಇರುವುದರಿಂದ ಶಾಲೆಗಳಿಗೆ ಬರುವ ಮಕ್ಕಳು ತೋಡು, ಹಳ್ಳ, ಹೊಳೆಗಳನ್ನು ದಾಟಿ ಬರುವ ಸಮಸ್ಯೆ ಇರುವುದರಿಂದ ಜುಲೈ 10ರಂದು ಮಕ್ಕಳಿಗೆ ರಜೆ ನೀಡಲಾಗಿದೆ. ಈ ಕುರಿತ ಅಭಿಪ್ರಾಯ ಸಂಗ್ರಹಿಸಲು ತಹಸೀಲ್ದಾರರು, ಶಿಕ್ಷಣಾಧಿಕಾರಿಗಳು ಹಾಗೂ ವಿವಿಧ ಖಾಸಗಿ ಮತ್ತು ಅನುದಾನಿತ ಶಾಲಾಡಳಿತಗಳ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ವಿಡಿಯೋ ಸಂವಾದ ನಡೆಸಿದ್ದಾರೆ. ಸಭೆಯಲ್ಲಿ ಕೇಳಿಬಂದ ಅಭಿಪ್ರಾಯದಂತೆ ಮುಂದಿನ ದಿನಗಳಲ್ಲಿ ರೆಡ್ ಅಲರ್ಟ್ ಇದ್ದರೂ, ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ನೀಡುವ ಬದಲು ಎಲ್ಲಿ ಹೆಚ್ಚಿನ ಮಳೆಯಾಗುತ್ತೋ ಆ ಭಾಗದಲ್ಲಿ ಮಾತ್ರ ರಜೆ ನೀಡಲು ಶಾಲೆಗಳು ಮತ್ತು ತಹಸೀಲ್ದಾರರಿಗೆ ಸೂಚನೆ ನೀಡಲಾಗಿದೆ.
Monday July 11th schools declared holiday, colleges to remain open says DC Rajendra. The deputy commissioner of Dakshina Kannada Dr K V Rajendra has announced a holiday for Anganwadi centres, and primary/high schools in the district on July 11. The Indian Meteorological Department in its press release has announced that active monsoon conditions are likely to continue for the next 5 days. From July 10, heavy rainfall is likely to occur at a few places in all the districts ranging from isolated to extremely heavy.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm