ಬ್ರೇಕಿಂಗ್ ನ್ಯೂಸ್
11-07-22 12:43 pm Mangalore Correspondent ಕರಾವಳಿ
ಉಳ್ಳಾಲ, ಜು.11: ಗೃಹಿಣಿಯೋರ್ವಳು ಗಂಡನ ಮನೆಯಲ್ಲಿ ನಿಗೂಢ ಸಾವನ್ನಪ್ಪಿದ ಘಟನೆ ಭಾನುವಾರ ಸಂಜೆ ಉಳ್ಳಾಲ ಮುಕ್ಕಚ್ಚೇರಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆಯನ್ನು ಜಂಶೀರ (25) ಎಂದು ಗುರುತಿಸಲಾಗಿದೆ. ಮೂಲತಃ ಮಿಲ್ಲತ್ ನಗರ ನಿವಾಸಿಯಾದ ಜಂಶೀರಾಗೆ ಎರಡು ವರ್ಷಗಳ ಹಿಂದೆ ಮುಕ್ಕಚ್ಚೇರಿ ನಿವಾಸಿ ಇರ್ಫಾನ್ ಜೊತೆ ವಿವಾಹವಾಗಿತ್ತು. ದಂಪತಿಗೆ 8 ತಿಂಗಳ ಗಂಡು ಮಗು ಇದೆ. ವಿವಾಹ ಆದ ಆರಂಭದಲ್ಲೇ ದಂಪತಿ ನಡುವೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಹಿರಿಯರು ಸೇರಿ ಮಾತುಕತೆ ನಡೆಸಿ ದಂಪತಿ ನಡುವಿನ ಕಲಹ ಶಮನಗೊಳಿಸುತ್ತಿದ್ದರು. ಭಾನುವಾರ ಸಂಜೆಯೂ ಗಂಡ ಹೆಂಡತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.
ಘಟನೆ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ. ಜಂಶೀರಾ ಸಹೋದರಿಗೆ ಆಕೆಯ ಗಂಡನ ಮನೆಯವರಿಂದ ಫೋನ್ ಕರೆ ಬಂದಿದ್ದು ಜಂಶೀರಾ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು ಆಕೆ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆದರೆ ಮನೆಮಗಳ ನಿಗೂಢ ಸಾವಿನ ಬಗ್ಗೆ ಜಂಶೀರಾ ಪೋಷಕರು ಶಂಕೆ ವ್ಯಕ್ತ ಪಡಿಸಿದ್ದಾರೆ. ಮೃತ ಜಂಶೀರಳ ಮೃತದೇಹವನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಇರಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವೇ ಸಾವಿನ ಹಿಂದಿನ ಅಸಲಿಯತ್ತು ಬೆಳಕಿಗೆ ಬರಲಿದೆ ಎನ್ನುವ ಮಾಹಿತಿಗಳಿವೆ. ಈ ನಡುವೆ, ಉಳ್ಳಾಲ ಪೊಲೀಸರು ಮೃತ ಜಂಶೀರಾಳ ಪತಿ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.
Mangalore 25 year old Woman found dead mysteriously in husbands house in Ullal, murder suspected. The deceased has been identified as Jamsira. Ullal police have taken husband into custody and are investigating.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm