ಬ್ರೇಕಿಂಗ್ ನ್ಯೂಸ್
11-07-22 09:28 pm Mangalore Correspondent ಕರಾವಳಿ
ಮಂಗಳೂರು, ಜುಲೈ 11: ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟು ಬಿಲ್ಲವ ಸಂಘಟನೆಗಳ ಕೋಪಕ್ಕೆ ಗುರಿಯಾಗಿದ್ದ ರಾಜ್ಯದ ಬಿಜೆಪಿ ಸರಕಾರ, ಗಾಯಕ್ಕೆ ಮುಲಾಮು ಹಚ್ಚಲು ಮುಂದಾಗಿದೆ. ಪ್ರತಿಭಟನೆ ಎಚ್ಚರಿಕೆಯ ಬಿಸಿ ಮುಟ್ಟಿದ ಬೆನ್ನಲ್ಲೇ ರಾಜ್ಯದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನಾರಾಯಣ ಗುರುಗಳ ಪಠ್ಯವನ್ನು ಹಿಂದೆ ಇದ್ದ ರೀತಿಯಲ್ಲೇ ಹತ್ತನೇ ತರಗತಿ ಸಮಾಜ ವಿಜ್ಞಾನ ಪಠ್ಯಕ್ಕೆ ಸೇರಿಸಲು ನಿರ್ಣಯ ತೆಗೆದುಕೊಂಡಿದ್ದಾರೆ.
ಇತ್ತೀಚೆಗೆ ಈಡಿಗ, ಬಿಲ್ಲವ- ಈಡಿಗ ರಾಷ್ಟ್ರೀಯ ಮಹಾಮಂಡಲದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಸೇರಿದಂತೆ ಕರಾವಳಿಯ ಹಲವು ಬಿಲ್ಲವ ಸಂಘಟನೆಗಳ ನಾಯಕರು ಬಿಜೆಪಿ ಸರಕಾರಕ್ಕೆ ಬಹಿರಂಗ ಎಚ್ಚರಿಕೆ ನೀಡಿದ್ದರು. ನಾರಾಯಣ ಗುರುಗಳ ಪಠ್ಯವನ್ನು ಮತ್ತೆ ಅದೇ ಜಾಗದಲ್ಲಿ ಸೇರ್ಪಡೆ ಮಾಡದೇ ಇದ್ದಲ್ಲಿ ಇದರ ಪರಿಣಾಮ ಪ್ರತಿಕೂಲವಾದೀತು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕರಾವಳಿಯಲ್ಲಿ ಬಿಲ್ಲವರನ್ನು ಪ್ರತಿನಿಧಿಸುವ ಕಾರ್ಕಳದ ಶಾಸಕ, ಇಂಧನ ಸಚಿವ ಸುನಿಲ್ ಕುಮಾರ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಜೊತೆ ಶಿಕ್ಷಣ ಸಚಿವರನ್ನು ಭೇಟಿಯಾಗಿದ್ದ ಸುನಿಲ್ ಕುಮಾರ್, ಕರಾವಳಿಯಲ್ಲಿ ಎದುರಾಗಿರುವ ಬಿಲ್ಲವ ಸಂಘಟನೆಗಳ ಆಕ್ರೋಶದ ಬಗ್ಗೆ ಮನವರಿಕೆ ಮಾಡಿದ್ದರು.
ಅಲ್ಲದೆ, ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಪಠ್ಯಕ್ಕೆ ಸೀಮಿತಗೊಳಿಸಿದಲ್ಲಿ ಎಲ್ಲರಿಗೂ ಲಭ್ಯವಾಗುವುದಿಲ್ಲ. ಹೀಗಾಗಿ ಗುರುಗಳ ವಿಚಾರ ಎಲ್ಲರಿಗೂ ದೊರೆಯುವಂತಾಗಲು ಸಮಾಜ ವಿಜ್ಞಾನ ಪುಸ್ತಕದಲ್ಲಿಯೇ ಪಠ್ಯ ಇರಬೇಕು ಎಂಬ ಬಗ್ಗೆ ಮನವಿ ಪತ್ರದಲ್ಲಿ ಸುನಿಲ್ ಕುಮಾರ್ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಸೂಚನಾ ಪತ್ರ ಬರೆದಿದ್ದು, ಈ ಹಿಂದೆ ಇದ್ದ ರೀತಿಯಲ್ಲೇ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿಯೇ ನಾರಾಯಣ ಗುರು ಪಠ್ಯವನ್ನು ಮುಂದುವರಿಸುವಂತೆ ಆದೇಶ ಹೊರಡಿಸುವಂತೆ ಸೂಚಿಸಿದ್ದಾರೆ.
ಆದರೆ ಈಗಾಗಲೇ ಬಹುತೇಕ ಪಠ್ಯ ಪುಸ್ತಕ ಅಚ್ಚಾಗಿದ್ದು ವಿದ್ಯಾರ್ಥಿಗಳ ಕೈಸೇರಿದೆ. ಇದರ ನಡುವಲ್ಲೇ ಪಠ್ಯಪುಸ್ತಕಗಳ ಬಗ್ಗೆ ಅಪಸ್ವರ ಕೇಳಿಬಂದಿತ್ತು. ಕರಾವಳಿಯಲ್ಲಿ ನಾರಾಯಣ ಗುರುಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರ ಕಯ್ಯಾರ ಕಿಂಞಣ್ಣ ರೈಗಳ ಪಠ್ಯ ಕೈಬಿಟ್ಟ ಬಗ್ಗೆ ತೀವ್ರ ವಿರೋಧ ಕೇಳಿಬಂದಿತ್ತು. ಇದೀಗ ನಾರಾಯಣ ಗುರುಗಳ ಪಠ್ಯವನ್ನು ಹಿಂದೆ ಇರುವ ರೀತಿಯಲ್ಲೇ ಹತ್ತನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಸೇರಿಸಲು ಶಿಕ್ಷಣ ಸಚಿವರು ಸೂಚಿಸಿದ್ದಾರೆ. ಇದರ ಕಾರ್ಯರೂಪ ಹೇಗೆ ಸಾಧ್ಯ ಎನ್ನುವ ಜಿಜ್ಞಾಸೆಯೂ ಜೊತೆಗಿದೆ. ಇತ್ತೀಚೆಗೆ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣೆ ಸಮಿತಿಯು ಹತ್ತನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿದ್ದ ನಾರಾಯಣ ಗುರುಗಳ ಪಠ್ಯವನ್ನು ಅಲ್ಲಿಂದ ತೆಗೆದು ಏಳನೇ ತರಗತಿಯ ಕನ್ನಡ ಪಠ್ಯಕ್ಕೆ ತಂದು ಕೂರಿಸಿತ್ತು. ಈ ರೀತಿ ಮಾಡಿದ್ದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು.
Text on Narayana Guru to be added back to text books after protest by Billavas in Mangalore. Minister Sunil Kumar and BJP state president Nalin Kumar kateel after discussion with education minister Nagesh have agreed to revert back contents of Text on Narayana Guru.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm