ಬ್ರೇಕಿಂಗ್ ನ್ಯೂಸ್
15-07-22 04:16 pm Mangalore Correspondent ಕರಾವಳಿ
ಉಳ್ಳಾಲ, ಜು.15 : ರಾ.ಹೆ. 66 ರ ತೊಕ್ಕೊಟ್ಟಿನ ಕಾಪಿಕಾಡು ಎಂಬಲ್ಲಿ ಲಾರಿ ಮತ್ತು ಎರಡು ಕಾರುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಧಾರ್ಮಿಕ ಮುಂದಾಳು ಕೆ.ಪಿ ಸುರೇಶ್ ಅವರು ಚಲಾಯಿಸುತ್ತಿದ್ದ ಕಾರು ಡಿವೈಡರ್ ಮೇಲೇರಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಮಾಡೂರು ಶ್ರೀ ಸಾಯಿಬಾಬ ಮಂದಿರದ ಮೊಕ್ತೇಸರರಾದ ಕೆ.ಪಿ ಸುರೇಶ್ ಅವರು ಇಂದು ಬೆಳಗ್ಗೆ ತಮ್ಮ ಕಾರಲ್ಲಿ ಮಂಗಳೂರು ಕಡೆಗೆ ಹೆದ್ದಾರಿಯಲ್ಲಿ ತೆರಳುತ್ತಿದ್ದ ವೇಳೆ ಕಾಪಿಕಾಡು ಎಂಬಲ್ಲಿ ಸ್ಕೂಟರಲ್ಲಿ ತೆರಳುತ್ತಿದ್ದ ಇಬ್ಬರು ಮಹಿಳೆಯರು ನಿಯಂತ್ರಣ ತಪ್ಪಿ ಕೆಳಗುರುಳಿದ್ದಾರೆ. ಮಹಿಳೆಯರಿಗೆ ಸಹಾಯ ಮಾಡಲು ಸುರೇಶ್ ಅವರು ತನ್ನ ಕಾರನ್ನ ಹೆದ್ದಾರಿ ಡಿವೈಡರ್ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಬಂದ ಕೇರಳ ನೋಂದಣಿ ಕಾರೊಂದು ಕಾಪಿಕಾಡಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಟೆಂಪೊವೊಂದನ್ನ ತಪ್ಪಿಸುವ ಭರದಲ್ಲಿ ಸುರೇಶ್ ಅವರ ಕಾರಿನ ಹಿಂಬದಿಗೆ ಬಲವಾಗಿ ಢಿಕ್ಕಿ ಹೊಡೆದಿದ್ದು ಸುರೇಶ್ ಅವರ ಕಾರು ಡಿವೈಡರ್ ಮೇಲಕ್ಕೇರಿದೆ. ಹಿಂದಿನಿಂದ ಅತೀ ವೇಗದಲ್ಲಿ ಬಂದ ಸರಕು ಲಾರಿಯು ಕೇರಳ ನೊಂದಣಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿದೆ.





ಸುರೇಶ್ ಅವರು ಕಾರನ್ನ ನಿಲ್ಲಿಸಿ ಮಹಿಳೆಯರನ್ನ ಮೇಲಕ್ಕೆತ್ತಲು ಕೆಳಗಿಳಿಯುತ್ತಿದ್ದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇತ್ತು. ಘಟನೆಯಲ್ಲಿ ಎರಡು ಕಾರುಗಳು ನಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Car goes up on divider after losing control in Thokottu at Ullal. Serial accident reporter. Highway patrol are on the stop.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm