ಬ್ರೇಕಿಂಗ್ ನ್ಯೂಸ್
17-07-22 01:37 pm Mangalore Correspondent ಕರಾವಳಿ
ಉಳ್ಳಾಲ, ಜು.17 : ಹಲವು ಪ್ರಕರಣಗಳಲ್ಲಿ ಉಳ್ಳಾಲ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ರೌಡಿ ಮುಕ್ತಾರ್ ಅಹಮ್ಮದ್ ನನ್ನು ಶನಿವಾರ ಸೆರೆ ಹಿಡಿಯಲಾಗಿತ್ತು. ಇಂದು ಬೆಳಗ್ಗೆ ಆತ ಉಪಯೋಗಿಸಿದ್ದ ಬೈಕ್ ಇನ್ನಿತರ ವಾಹನಗಳನ್ನು ವಶಕ್ಕೆ ಪಡೆಯಲು ಅಸೈಗೋಳಿಗೆ ಪೊಲೀಸರು ಆರೋಪಿಯನ್ನು ಕರೆದೊಯ್ದಿದ್ದರು. ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ತಪ್ಪಿಸಲು ಪ್ರಯತ್ನಿಸಿದ್ದಾನೆ. ಉಳ್ಳಾಲ ಇನ್ಸ್ ಪೆಕ್ಟರ್ ಎಚ್ಚರಿಕೆ ನೀಡಿದರೂ, ತಪ್ಪಿಸಿಕೊಳ್ಳಲು ಯತ್ನಿಸಿದ್ದು ಆತನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕೊಣಾಜೆ ಠಾಣೆ ಬಳಿಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು ಘಟನಾ ಪ್ರದೇಶಕ್ಕೆ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಗಾಯಗೊಂಡ ರೌಡಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರೌಡಿ, ಉಳ್ಳಾಲ ಧರ್ಮನಗರ ಬೊಟ್ಟು ನಿವಾಸಿಯಾಗಿದ್ದು ವಿವಿಧ ಠಾಣೆಗಳಲ್ಲಿ 15ಕ್ಕೂ ಹೆಚ್ಚು ಪ್ರಕರಣ ಎದುರಿಸುತ್ತಿದ್ದಾನೆ. 2014 ರಲ್ಲಿ ಪಾತಕ ಲೋಕಕ್ಕೆ ಎಂಟ್ರಿಯಾಗಿದ್ದ ಮುಕ್ತಾರ್, ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ ಹಲವು ಗಂಭೀರ ಪ್ರಕರಣ ಎದುರಿಸುತ್ತಿದ್ದಾನೆ. 5 ವರುಷಗಳಲ್ಲಿ ಆರು ಗಂಭೀರ ಪ್ರಕರಣಗಳಲ್ಲಿ ಮುಕ್ತಾರ್ ಭಾಗಿಯಾಗಿದ್ದು ಕೇರಳ ಭಾಗದಲ್ಲಿ ಅವಿತುಕೊಂಡಿದ್ದ. ಆರು ಕೊಲೆಯತ್ನ, ಎರಡು ರಾಬರಿ, ಆರ್ಮ್ಸ್ ಆ್ಯಕ್ಟ್ ಪ್ರಕರಣ ಇದೆ. ಆರೋಪಿ ವಿರುದ್ಧ ಆರು ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. 14-15 ಜನ ಈತನ ಜೊತೆಗೆ ಕೃತ್ಯದಲ್ಲಿ ಸಹಕರಿಸಿದ್ದಾರೆ. ಅವರ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರು ಹಿಂದೆ ಬಿದ್ದಿದ್ದಾರೆ. ಆರೋಪಿ ವಿರುದ್ಧ ಗೂಂಡಾ ಏಕ್ಟ್ ಹಾಕಲು ತಯಾರಿ ನಡೆಸಿದ್ದೆವು ಎಂದು ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶನಿವಾರ ಆತನನ್ನು ವಶಕ್ಕೆ ಪಡೆದಿದ್ದರು. ಇಂದು ಬೆಳಗ್ಗೆ ಹೆಚ್ಚಿನ ವಿಚಾರಣೆಗಾಗಿ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಮತ್ತು ತಂಡ ಕೊಣಾಜೆ ಠಾಣೆಯ ಬಳಿಯ ಅಸೈಗೋಳಿ ಅಭಯಾಶ್ರಮದ ಬಳಿಗೆ ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಈ ವೇಳೆ ಬೈಕ್ ಪೊದೆಯಲ್ಲಿದೆ ಎಂದು ಹೇಳಿದ್ದರಿಂದ ಅಲ್ಲಿಗೆ ತೆರಳಿದ್ದರು. ಈ ವೇಳೆ, ಇಬ್ಬರು ಪೊಲೀಸ್ ಸಿಬಂದಿಗೆ ಹಲ್ಲೆಗೈದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಮಾತು ಕೇಳದ ಕಾರಣ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
ಉಳ್ಳಾಲ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ವಾಸುದೇವ ಚೌಹಾಣ್ ಮತ್ತು ಅಕ್ಬರ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಣಾಜೆಯಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ; ಪೊಲೀಸರಿಗೆ ಹಲ್ಲೆಗೈದಿದ್ದಕ್ಕೆ ಗುಂಡು ಹಾರಿಸಿ ಬಂಧನ
Police firing by Ullal police in Mangalore, Accused was booked in more than 15 cases, goonda act fixed says Police Commissioner Shashi Kumar. The accused tried to assault the police personnel during spot inspection after which Ullal Inspector Sandeep had to open fire.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 06:33 pm
Mangalore Correspondent
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm