ಬ್ರೇಕಿಂಗ್ ನ್ಯೂಸ್
19-07-22 09:20 pm Mangalore Correspondent ಕರಾವಳಿ
ಮಂಗಳೂರು, ಜು.19 : ಹೆಚ್ಚಿನ ಕೇರಳದ ಪ್ರಯಾಣಿಕರು ಮಂಗಳೂರಿನ ವಿಮಾನ ನಿಲ್ದಾಣದ ಮೂಲಕ ಬಂದು ಹೋಗುವುದರಿಂದ, ನಿಲ್ದಾಣದ ಸಿಬ್ಬಂದಿಗಳು ಮಂಕಿ ಫಾಕ್ಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಏರ್ಲೈನ್ಸ್ ಸಿಬ್ಬಂದಿಗಳು ವಿಮಾನ ಲ್ಯಾಂಡ್ ಆಗುವ ಮೊದಲೇ ಪ್ರಯಾಣಿಕರಲ್ಲಿ ಜ್ವರ ಹಾಗೂ ಚರ್ಮದ ಗುಳ್ಳೆಗಳಿದೆಯೇ ಎಂದು ಪತ್ತೆ ಹಚ್ಚಬೇಕು, ಆ ರೀತಿಯ ಲಕ್ಷಣಗಳಿದ್ದರೆ ಅವರನ್ನು ಪ್ರತ್ಯೇಕಿಸಬೇಕು. ಅಲ್ಲದೆ, ವಿಮಾನ ನಿಲ್ದಾಣದ ಆರೋಗ್ಯಾಧಿಕಾರಿಗಳಿಂದ ತಪಾಸಣೆ ಮಾಡಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಸೂಚನೆ ನೀಡಿದ್ದಾರೆ.
ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಾನ್ಪರೆನ್ಸ್ ಹಾಲ್ನಲ್ಲಿ ಜಿಲ್ಲಾಧಿಕಾರಿ ಮಂಕಿ ಫಾಕ್ಸ್ ರೋಗದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ವಿಮಾನ ಲ್ಯಾಂಡ್ ಆದ ಮೇಲೆ ಪ್ರಯಾಣಿಕರನ್ನು ಮೇಲ್ವಿಚಾರಣೆ ಮಾಡುವ ಸಿಬ್ಬಂದಿಗಳು ಜ್ವರ ಹಾಗೂ ಚರ್ಮದ ಗುಳ್ಳೆಯ ಬಗ್ಗೆ ಪ್ರಯಾಣಿಕರಿಂದ ಖಚಿತ ಪಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿರುವ ಪ್ರಯಾಣಿಕರನ್ನು (ಸಂಶಯಾಸ್ಪದ) ಪ್ರತ್ಯೇಕಿಸಿ ಆಂಬುಲೆನ್ಸ್ ನಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತೆರೆಯಲಾದ ಮಂಕಿ ಫಾಕ್ಸ್ ಐಸೋಲೇಶನ್ ವಾರ್ಡ್ ಗೆ ದಾಖಲಿಸುವಂತೆ ಸೂಚಿಸಿದರು.

ಮಂಕಿ ಫಾಕ್ಸ್ ಹರಡದಂತೆ ಜಾಗೃತಿ ಮೂಡಿಸಲು ಕನ್ನಡ, ಮಲಯಾಳಂ, ಹಿಂದಿ, ಇಂಗ್ಲಿಷ್ ಭಾಷೆಯಲ್ಲಿ ಸ್ಲೋಗನ್ ಗಳನ್ನು ಸಿದ್ಧಪಡಿಸಲು ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಸರ್ವೇಕ್ಷಣಾಧಿಕಾರಿಗೆ ಸೂಚಿಸಿದ ಜಿಲ್ಲಾಧಿಕಾರಿ, ವಿಮಾನ ನಿಲ್ದಾಣದ ಅಧಿಕಾರಿಗಳು, ಪೋಸ್ಟರ್ ಗಳನ್ನು ತಯಾರಿಸಿ ಒಳಬರುವ ಮತ್ತು ಹೊರ ಹೋಗುವ ಸ್ಥಳಗಳಲ್ಲಿ ಪ್ರರ್ದಶಿಸುವಂತೆ ಸೂಚಿಸಿದರು.
ಮಂಕಿ ಫಾಕ್ಸ್ ಜಾಗೃತಿ ಮೂಡಿಸುವ ವಿವಿಧ ಫೋಟೋಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಾಟ್ಸಾಪ್ ಗ್ರೂಪ್ನಲ್ಲಿ ಶೇರ್ ಮಾಡಲು ವಿಮಾನ ನಿಲ್ದಾಣದ ಆರೋಗ್ಯಾಧಿಕಾರಿ ಹಾಗೂ ಏರ್ಲೈನ್ಸ್ ಅಧಿಕಾರಿಯವರಿಗೆ ನಿರ್ದೇಶನ ನೀಡಿದರು. ಇದಲ್ಲದೆ, ಮಂಕಿ ಫಾಕ್ಸ್ ಬಗ್ಗೆ ಕ್ಯಾಬ್ ಚಾಲಕರಿಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಅರಿವು ಮೂಡಿಸಬೇಕು. ವಿಮಾನ ನಿಲ್ದಾಣದ ಡಿಜಿಟಲ್ ಡಿಸ್ಪ್ಲೇಯಲ್ಲಿ ಹಾಗೂ ಮೈಕ್ ಮೂಲಕ ಅರಿವು ಮೂಡಿಸಬೇಕು, ಮಂಕಿ ಫಾಕ್ಸ್ ಹರಡದಂತೆ ಜಿಲ್ಲಾಡಳಿತ ಸಾಕಷ್ಟು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ. ಜನರು ಭೀತರಾಗದೆ ಅರಿವು ಮೂಡಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸುವಂತೆ ಕೋರಿದರು.
ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಬಿ.ವಿ, ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಹೆಚ್ , ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್ ಕೆ., ವಿಮಾನ ನಿಲ್ದಾಣದ ಹೆಡ್ ಆಪರೇಷನ್ ಆಫಿಸರ್ ಶ್ರೀಕಾಂತ್ ಟಾಟಾ, ವಿಮಾನ ನಿಲ್ದಾಣ ವೈದ್ಯಾಧಿಕಾರಿ ಡಾ. ನಿಶಿತಾ, ಏರ್ಲೈನ್ಸ್ ಮುಖ್ಯಸ್ಥರು, ಕಸ್ಟಮ್ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಸಭೆಯಲ್ಲಿದ್ದರು.
Monkey pox, strict screening of every passenger that lands at Mangalore International Airport To be conducted orders DC Rajendra kumar. The order came to pass after a person from kerala kannur was tested positive for monkey pox And 35 staffs of mangalore inte rnational airport are under isolation.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm