ಬ್ರೇಕಿಂಗ್ ನ್ಯೂಸ್
21-07-22 09:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 21 : ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋವು ಕಳ್ಳರ ಬಂಧನಕ್ಕೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಸೂಚನೆ ನೀಡಿದ್ದಾರೆ.
ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆಯಲು ಗೋಕಳ್ಳರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದ್ದು ಅದರಂತೆ ನಡೆದುಕೊಳ್ಳಬೇಕು ಎಂದು ಸೂಚನೆ ನೀಡಿರುವ ಶಾಸಕ ಕಾಮತ್, ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಬಜಾಲ್ ಕಾನಕರಿಯ ನಿವಾಸಿ ಅಶ್ವಿನ್ ಎಂಬವರ ಮನೆಯ ಹಟ್ಟಿಯಿಂದ ಗೋವು ಕಳ್ಳತನವಾಗಿದ್ದು ಕಂಕನಾಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದು ಶಾಸಕ ಕಾಮತ್ ಪೊಲೀಸರನ್ನು ಕರೆದು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರದ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಶಾಸಕ ವೇದವ್ಯಾಸ್ ಕಾಮತ್, ಹಿಂದು ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಗೋವಿನಿಂದಲೇ ಬದುಕು ಸಾಗಿಸುವ ಅನೇಕ ಕುಟುಂಬಗಳಿವೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರವು ಗೋಹತ್ಯೆ ಪ್ರತಿಬಂಧಕವನ್ನು ಜಾರಿಗೊಳಿಸಿದ್ದು ಗೋಕಳ್ಳರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಗೋಕಳ್ಳತನ, ಗೋಹತ್ಯೆಯ ಅಪರಾಧ ರುಜುವಾತಾದರೆ ಆಸ್ತಿ ಮುಟ್ಟುಗೋಲು ಹಾಕಲು ಸೂಚನೆ ನೀಡಿದ್ದು ಇದು ಗೋಕಳ್ಳರಿಗೆ ಎಚ್ಚರಿಕೆಯ ಸಂದೇಶವಾಗಿದೆ. ಮುಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾದರೆ ಮತ್ತಷ್ಟು ಕಠಿಣ ಶಿಕ್ಷೆ ಅನುಭವಿಸಲು ಸಿದ್ಧರಿರಬೇಕೆಂದು ಗೋಕಳ್ಳರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಕಂಕನಾಡಿ ಠಾಣಾಧಿಕಾರಿ ಸಿದ್ದಣ್ಣ ಗೌಡ ಭಜಂತ್ರಿ, ಹಿಂದೂ ಸಂಘಟನೆಯ ಮುಖಂಡರಾದ ಕಿರಣ್ ರೈ ಬಜಾಲ್, ಉಮೇಶ್ ಜಪ್ಪಿನಮೊಗರು, ಪ್ರದೀಪ್ ಪಂಪ್ವೆಲ್, ಪದ್ಮನಾಭ ನಾವೂರು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore Cow theft at Bajal, MLA Vedavyas kamath orders police to take strict action.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm