ಬ್ರೇಕಿಂಗ್ ನ್ಯೂಸ್
23-07-22 11:47 am Mangalore Correspondent ಕರಾವಳಿ
ಉಳ್ಳಾಲ, ಜು.23 : ಕಡಲ್ಕೊರೆತ ತುರ್ತು ತಡೆ ಕಾಮಗಾರಿಗೆ NDRF ಸ್ಕೀಮ್ ನಿಂದ ಹಣ ಬಿಡುಗಡೆ ಮಾಡಲು ಅವಕಾಶವಿದ್ದರೂ NDRF ನಿಧಿಯನ್ನ ಖರ್ಚು ಮಾಡದೆ ಸುಮ್ಮನೆ ಕುಳಿತಿದ್ದಾರೆ. ಇವರಿಗೆ ತುರ್ತು ಕಾಮಗಾರಿ ಎತ್ತಿಕೊಳ್ಳಲು ಯಾರು ಅಡ್ಡಿಯಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಪ್ರಶ್ನಿಸಿದ್ದಾರೆ.
ಶನಿವಾರ ಬೆಳಗ್ಗೆ ಅವರು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನ ಆಲಿಸಿದರು. ಕಡಲ್ಕೊರೆತ ಸಮಸ್ಯೆ ಹೊಸದೇನು ಅಲ್ಲ. ನಮ್ಮ ಸರಕಾರ ಆಡಳಿತದಲ್ಲಿದ್ದಾಗ ಅಳಿವೆಬಾಗಿಲು ಸೇರಿದಂತೆ ಅನೇಕ ಕಡಲ್ಕೊರೆತ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ನಡೆಸಿದ್ದೇವೆ. ಯಾವುದೇ ಶಾಶ್ವತ ಕಾಮಗಾರಿ ನಡೆಸಿದರೂ ಪ್ರತಿ ವರುಷವೂ ನಿರ್ವಹಣಾ ಕಾಮಗಾರಿ ಅಗತ್ಯ.


ಆದರೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರವು ಅಸಡ್ಡೆ ತೋರಿ ಕಳೆದ ಮೂರು ವರ್ಷಗಳಿಂದಲೂ ಕಡಲ್ಕೊರೆತ ಪೀಡಿತ ಉಚ್ಚಿಲ, ಬಟ್ಟಪ್ಪಾಡಿ ಪ್ರದೇಶಗಳನ್ನ ಕಡೆಗಣಿಸುತ್ತಾ ಬಂದಿದೆ. ಬಜೆಟಲ್ಲಿ ಕನಿಷ್ಠ ನಿರ್ವಹಣೆಗೂ ಹಣ ಕೊಡದಿದ್ದರೆ ಕಡಲು ಪ್ರಕ್ಷುಬ್ಧಗೊಂಡು ತೀರ ಪ್ರದೇಶವನ್ನ ನುಂಗುವುದು ಖಂಡಿತ. ಈಗಾಗಲೇ ಸ್ಥಳೀಯ ಬೋವಿ ಜನಾಂಗದವರು ಪ್ರದೇಶದಲ್ಲಿ ತಮ್ಮ ಅಸ್ತಿತ್ವವನ್ನೇ ಕಳಕೊಳ್ಳುವ ಭೀತಿಯಲ್ಲಿದ್ದಾರೆಂದರು.

ತಾನು ಮತ್ತು ಶಾಸಕ ಖಾದರ್ ಅವರು ತಕ್ಷಣವೇ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಕಡಲ್ಕೊರೆತ ತಡೆಗೆ ತುರ್ತು, ಮಾಧ್ಯಮಿಕ ಮತ್ತು ಶಾಶ್ವತ ಕಾಮಗಾರಿ ನಡೆಸುವ ಬಗ್ಗೆ ಮಾತುಕತೆ ನಡೆಸಲಿದ್ದೇವೆ ಎಂದರು. ಸ್ಥಳೀಯ ಶಾಸಕ ಯು.ಟಿ ಖಾದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಜೊತೆಯಲ್ಲಿದ್ದರು.
Why is state government neglecting Sea erosion so much, what's making them neglect such things slammed former congress minister Veerappa Moily visiting sea erosion effected areas at Ullal in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm