ಬ್ರೇಕಿಂಗ್ ನ್ಯೂಸ್
26-07-22 12:19 am Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಮಂಗಳೂರು ನಗರದಲ್ಲಿ ಮತ್ತೆ ಪಬ್ ಮೇಲೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಲ್ಮಠದ ಪಬ್ ಒಂದರಲ್ಲಿ ಪಿಯು ಕಾಲೇಜು ವಿದ್ಯಾರ್ಥಿಗಳು ಪಾರ್ಟಿಯಲ್ಲಿ ತೊಡಗಿದ್ದ ಮಾಹಿತಿ ಪಡೆದು ಬಜರಂಗದಳ ಕಾರ್ಯಕರ್ತರು ತಡೆ ಒಡ್ಡಿದ್ದಾರೆ.
ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪಾರ್ಟಿ ನಡೆಸುತ್ತಿದ್ದರು. ಕಾಲೇಜಿನ ಫೇರ್ ವೆಲ್ ನೆಪದಲ್ಲಿ ಪಬ್ ನಲ್ಲಿ ಪದವಿ ವಿದ್ಯಾರ್ಥಿಗಳು ಪಾರ್ಟಿ ಆಯೋಜಿಸಿದ್ದರು. ಆದರೆ ಯುವಕ- ಯುವತಿಯರು ಕುಡಿದು ಮೋಜು ಮಸ್ತಿ ಮಾಡುತ್ತಿದ್ದಾರೆಂದು ಆರೋಪಿಸಿ ಬಜರಂಗದಳ ಕಾರ್ಯಕರ್ತರು ಪಬ್ ಒಳಕ್ಕೆ ನುಗ್ಗಿದ್ದರು. ಕೆಲ ದಿನಗಳ ಹಿಂದಷ್ಟೇ ಲಿಪ್ ಲಾಕ್ ವಿಡಿಯೋ ಮೂಲಕ ಇದೇ ಕಾಲೇಜಿನ ವಿದ್ಯಾರ್ಥಿಗಳು ಸುದ್ದಿಯಾಗಿದ್ದರು.
ಸಡನ್ನಾಗಿ ಒಳಹೊಕ್ಕ ಬಜರಂಗದಳ ಕಾರ್ಯಕರ್ತರು ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನ ಹೊರ ಕಳುಹಿಸಿದ್ದಾರೆ. ಬಳಿಕ ಪೊಲೀಸರು ಆಗಮಿಸಿದ್ದು ಬಜರಂಗದಳದ ಕಾರ್ಯಕರ್ತರನ್ನ ಚದುರಿಸಿದ್ದಾರೆ. ಅಲ್ಲದೆ, ಪಾರ್ಟಿ ನಿಲ್ಲಿಸುವಂತೆ ಪೊಲೀಸರು ಆಯೋಜಕರಿಗೆ ಸೂಚನೆ ನೀಡಿದ್ದಾರೆ. ಪಾರ್ಟಿಯನ್ನು ಅರ್ಧದಲ್ಲೇ ನಿಲ್ಲಿಸಿ ತುಂಡುಡುಗೆ ತೊಟ್ಟಿದ್ದ ವಿದ್ಯಾರ್ಥಿನಿಯರು ಹೊರಗೆ ತೆರಳಿದ್ದಾರೆ.
ಹತ್ತು ವರ್ಷಗಳ ಹಿಂದೆ ಇದೇ ಬಲ್ಮಠದ ಪಬ್ ಮೇಲೆ ಬಜರಂಗದಳ, ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದರು. ಅಲ್ಲದೆ, ಅಲ್ಲಿದ್ದ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ್ದು ವಿಡಿಯೋದಲ್ಲಿ ದಾಖಲಾಗಿತ್ತು. ಹಾಗಾಗಿ ಹಲವರು ಜೈಲು ಸೇರಿದ್ದಲದೆ, ದೇಶದಲ್ಲಿ ದೊಡ್ಡ ಸುದ್ದಿಯಾಗಿತ್ತು. ಈ ಬಾರಿ ಯಾವುದೇ ರೀತಿ ಹಲ್ಲೆಗೆ ಮುಂದಾಗಿಲ್ಲ. ಬದಲಿಗೆ, ಪಾರ್ಟಿ ನಿಲ್ಲಿಸಿ ವಿದ್ಯಾರ್ಥಿಗಳು ಹೊರ ನಡೆಯುವಂತೆ ಸೂಚಿಸಿದ್ದಾರೆ.
Some Bajarang Dal workers played the spoil sport at a student party held at Balmatta pub in Mangalore on Monday, July 25. It is said that the students of a private college were doing a farewell party in the Recycle -The Lounge pub at Woodside when several Bajrang Dal workers barged into the pub, hurled abuses at the partying crowd and force-stopped the event.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm