ಬ್ರೇಕಿಂಗ್ ನ್ಯೂಸ್
30-07-22 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 30 : ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಆವರಿಸಿದೆ. ಕೊಟ್ಟಾರ, ಕೊಡಿಯಾಲಗುತ್ತು, ಬಳ್ಳಾಲಬಾಗ್ ಪ್ರದೇಶದಲ್ಲಿ ಮಳೆ ನೀರು ಬಂದಿದ್ದು ಜನರ ಸಂಚಾರಕ್ಕೆ ತೊಡಕಾಗಿದೆ.
ರಾತ್ರಿಯಿಡೀ ಭಾರೀ ಗುಡುಗು ಸಹಿತ ಮಳೆಯಾಗಿದೆ. ಮಂಗಳೂರು ನಗರ, ಸುರತ್ಕಲ್, ಮುಲ್ಕಿ ಭಾಗದಲ್ಲಿ ಹೆಚ್ಚು ಮಳೆಯಾದ ಮಾಹಿತಿಯಿದೆ. ಮಂಗಳೂರಿನ ಬಳ್ಳಾಲ್ ಬಾಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿತ್ರು. ಅಲ್ಲಿನ ಹಲವು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನುಗ್ಗಿ ಜನಜೀವನಕ್ಕೆ ತೊಂದರೆಯಾಗಿತ್ತು. ಪಾಂಡೇಶ್ವರ ಶಿವನಗರ ಭಾಗದಲ್ಲಿ ಮನೆಗಳು ಜಲಾವೃತಗೊಂಡಿವೆ. ಕರಂಗಲ್ಪಾಡಿ, ಮಂಗಳೂರು ರೈಲ್ವೇ ನಿಲ್ದಾಣ , ಪಂಪ್ವೆಲ್ ಹೆದ್ದಾರಿ, ಅತ್ತಾವರ ಹೀಗೆ ಹಲವು ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ, ಮನೆಗಳಿಗೆ ನೀರು ನುಗ್ಗಿದ್ದು, ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಸಾಧ್ಯವಾಗಲಿಲ್ಲ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಮಂಗಳೂರು, ಮುಲ್ಕಿ - ಮೂಡುಬಿದಿರೆ, ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಬೆಳಗ್ಗೆ ರಜೆ ಘೋಷಣೆ ಮಾಡಿದ್ದರು. ಅಲ್ಲದೆ, ಪುತ್ತೂರು, ಸುಳ್ಯ, ಬೆಳ್ತಂಗಡಿ ಭಾಗದಲ್ಲಿ ಆಯಾ ಶಿಕ್ಷಣಾಧಿಕಾರಿಗಳು ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ಸೂಚಿಸಿದ್ದಾರೆ. ನಸುಕಿನಲ್ಲಿ ಭಾರೀ ಎನ್ನುವಂತೆ ಸುರಿದ ಮಳೆ ಬೆಳಗ್ಗೆ ಹೊತ್ತು ಸರಿಯುತ್ತಿದ್ದಂತೆ ಕಡಿಮೆಯಾಗಿದೆ. ಎಂಟು ಗಂಟೆ ನಂತರ ಪೂರ್ತಿ ಬಿಸಿಲು ಆವರಿಸಿದೆ. ಹೀಗಾಗಿ ನೆರೆ ನೀರು ಕೂಡ ಕಡಿಮೆಯಾಗಿದೆ. ಆದರೆ ಒಂದೇ ಮಳೆಗೆ ಈ ಪರಿ ನೀರು ಬಂದಿರುವುದು ಜನರನ್ನು ಆತಂಕಕ್ಕೆ ದೂಡಿದೆ.
Just one Heavy rain in Mangalore and it's flooded because of drain water overflow.#Smartcity@DCDK9 @MangaloreCity @varthabharati @janadhvani pic.twitter.com/PUat34IMQV
— Inzam Bajpe (@inzam_7) July 30, 2022
Heavy rains have been lashing in the district of Dakshina Kannada for the past 3 hours on Saturday July 30, including the city of Mangaluru. The roads inside the city are submerged. Heavy water-logging is witnessed is many areas. Motorists were seen struggling to move their vehicles through the submerged roads. Water also gushed into the premises of Mangaluru Central railway station.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm