ಬ್ರೇಕಿಂಗ್ ನ್ಯೂಸ್
31-07-22 11:07 pm udupi Correspondent ಕರಾವಳಿ
ಉಡುಪಿ, ಜುಲೈ 31: ಆಧುನಿಕ ಮಣಿಪಾಲದ ಶಿಲ್ಪಿ ಎಂದೇ ಖ್ಯಾತಿ ಪಡೆದಿರುವ ಡಾ. ಟಿಎಂಎ ಪೈ ಅವರ ಹಿರಿಯ ಪುತ್ರ, ಉದಯವಾಣಿ ಪತ್ರಿಕೆಯ ಸ್ಥಾಪಕರಾಗಿದ್ದಲ್ಲದೆ, ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿ ಸುದೀರ್ಘ ಅವಧಿಗೆ ಮುನ್ನಡೆಸಿದ್ದ ಟಿ.ಮೋಹನದಾಸ ಎಂ. ಪೈ ನಿಧನರಾಗಿದ್ದಾರೆ.
ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದ ಬಳಿಕ ಟಿ. ಮೋಹನದಾಸ್ ಎಂ. ಪೈ (89) ಅಸುನೀಗಿದ್ದಾರೆ. ಎಂಜಿಎಂ ಕಾಲೇಜಿನಲ್ಲಿ ಆಗಸ್ಟ್ 1ರಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉಡುಪಿಯ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಅವರು ತಮ್ಮಂದಿರಾದ ಡಾ.ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ, ತಂಗಿಯರಾದ ವಸಂತಿ ಆರ್. ಶೆಣೈ, ಜಯಂತಿ ಪೈ, ಇಂದುಮತಿ ಪೈ, ಆಶಾ ಪೈ, ಸಹೋದರ ಟಿ.ಸತೀಶ್ ಯು. ಪೈ ಅವರನ್ನು ಅಗಲಿದ್ದಾರೆ.
ಆಧುನಿಕ ಮಣಿಪಾಲದ ಶಿಲ್ಪಿ ಡಾ. ಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., 'ಉದಯವಾಣಿ'ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಮೋಹನದಾಸ್ ಪೈ ಸುದೀರ್ಘ ಅವಧಿಯಲ್ಲಿದ್ದು ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾಗಿದ್ದರು.
ಸ್ವಾತಂತ್ರ್ಯಕ್ಕೂ ಮುನ್ನ 1933ರ ಜೂ.20ರಂದು ಜನಿಸಿದ್ದ ಮೋಹನದಾಸ್ ಪೈ ಡಾ.ಟಿಎಂಎ ಪೈಯವರ ಹಿರಿಯ ಪುತ್ರ. ಇವರಿಗೆ ಮೂರು ವರ್ಷ ಆಗಿರುವಾಗಲೇ ತಂದೆಯವರು ಉಡುಪಿಯಿಂದ ಮಣಿಪಾಲಕ್ಕೆ ಸ್ಥಳಾಂತರಗೊಂಡು ಅಲ್ಲಿನ ಅಭಿವೃದ್ಧಿ ಶಕೆ ಆರಂಭಿಸಿದ್ದರು. ತಂದೆಯವರ ಹೊಸ ಶಾಲೆಯಲ್ಲಿ (ಮಣಿಪಾಲ ಅಕಾಡೆಮಿ ಶಾಲೆ), ಉಡುಪಿಯ ಮೋಡರ್ನ್ ಶಾಲೆಯಲ್ಲಿ ಪ್ರಾಾಥಮಿಕ ಶಿಕ್ಷಣ, ಉಡುಪಿಯ ಬೋರ್ಡ್ ಹೈಸ್ಕೂಲ್ನಲ್ಲಿ ಪ್ರೌಢಶಾಲಾ ಶಿಕ್ಷಣ. ಬಳಿಕ ತಂದೆಯವರೇ ಹೊಸತಾಗಿ ಆರಂಭಿಸಿದ ಎಂಜಿಎಂ ಕಾಲೇಜಿನಲ್ಲಿ (1949-51) ಇಂಟರ್ಮೀಡಿಯೆಟ್ ಶಿಕ್ಷಣ ಪಡೆದಿದ್ದರು.
ಕಾನೂನು ಪದವಿಯಲ್ಲಿ ಮೊದಲ ಸ್ಥಾನಿ
ಎಂಜಿಎಂ ಕಾಲೇಜಿನ ಮೊದಲ ತಂಡದ ವಿದ್ಯಾರ್ಥಿಯಾಗಿದ್ದರು. ಕೊಲ್ಹಾಪುರದಲ್ಲಿ ಕಾನೂನು ಶಿಕ್ಷಣ ಪಡೆದ (1951-53) ಮೋಹನದಾಸ ಪೈಯವರು ಪುಣೆ ವಿ.ವಿ.ಯಲ್ಲಿ ಪ್ರಥಮ ರಾಂಕ್ ಗಳಿಸಿದ್ದರು. ಆಗ ಕಾನೂನು ಪದವಿ ಅಧ್ಯಯನ ನಡೆಸಲು ಕರಾವಳಿಯಲ್ಲಿ ಅವಕಾಶವಿರಲಿಲ್ಲ.
ಶಿಕ್ಷಣದ ಬಳಿಕ ತಂದೆಯವರು ಆರಂಭಿಸಿದ ಸಂಸ್ಥೆಗಳಲ್ಲಿಯೇ ತೊಡಗಿಸಿದ್ದರು. ಮೊದಲಾಗಿ ಮಣಿಪಾಲದ ಹೆಂಚಿನ ಕಾರ್ಖಾನೆ ನಡೆಸುತ್ತಿದ್ದ ಕೆನರಾ ಲ್ಯಾಂಡ್ ಇನ್ವೆಸ್ಟ್ ಮೆಂಟ್ಸ್ ಸಂಸ್ಥೆಯ ಜನರಲ್ ಮೆನೇಜರ್ ಆಗಿ ಸೇರಿದ್ದರು. ಇದರ ಜತೆ ಮಣಿಪಾಲ್ ಪವರ್ ಪ್ರೆಸ್ನ ಆಡಳಿತ ಪಾಲುದಾರರಾಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಿಕೊಂಡಿದ್ದರು.
ಪೈಯವರು ಆಡಳಿತ ಮತ್ತು ಹಣಕಾಸು ಯೋಜನೆಯ ಜವಾಬ್ದಾರಿಯನ್ನು ನೋಡಿಕೊಂಡಿದ್ದರೆ, ತಮ್ಮ ಟಿ.ಸತೀಶ್ ಪೈಯವರು ಉತ್ಪಾದನೆಯ ಜವಾಬ್ದಾರಿ ವಹಿಸಿಕೊಂಡಿದ್ದರು. 1970ರಲ್ಲಿ ಮೋಹನದಾಸ ಪೈಯವರ ನೇತೃತ್ವದಲ್ಲಿ ‘ಉದಯವಾಣಿ’ ದಿನಪತ್ರಿಕೆ ಆರಂಭವಾಗಿತ್ತು. ಅಲ್ಪಾವಧಿಯಲ್ಲಿಯೇ ಜನಪ್ರಿಯಗೊಂಡು ಕರಾವಳಿಯಲ್ಲಿ ಮನೆಮಾತಾಗಿತ್ತು.
Thonse Mohandas M Pai, president, MGM College Trust, Udayavani founder and eldest son of Dr TMA Pai breathed his last on Sunday, July 31 in Kasturba Hospital, Manipal. He was 89. Born on June 2, 1933, T Mohandas M Pai was an alumnus of MGM College, Udupi. He also served as president of Dr TMA Pai Foundation. He has also been a president of ICDS Ltd which later became Syndicate Bank, Manipal Media Network Ltd that runs Udayavani and various other organisations.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm