ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.

ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm