ಬ್ರೇಕಿಂಗ್ ನ್ಯೂಸ್
02-08-22 10:03 pm udupi Correspondent ಕರಾವಳಿ
ಉಡುಪಿ, ಆಗಸ್ಟ್ 2 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರವೀಣ್ ಕೊಲೆಯಾದ ಬೆನ್ನಲ್ಲೇ ಪ್ರಕರಣದ ಬಗ್ಗೆ ಎನ್ಐಎ ತನಿಖೆ ನಡೆಸಿ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಕೂಡಲೇ ಅದಕ್ಕೆ ಪ್ರತಿಕ್ರಿಯಿಸಿದ್ದ ಅಮಿತ್ ಶಾ, ಪ್ರಕರಣದ ಬಗ್ಗೆ ಎನ್ಐಎ ತಂಡದಿಂದ ತನಿಖೆ ವಹಿಸಿಕೊಳ್ಳಲು ಸೂಚನೆ ನೀಡಿದ್ದರು.

ಮಂಗಳವಾರ ದೆಹಲಿಯ ಗೃಹ ಸಚಿವಾಲಯದ ಕಚೇರಿಯಲ್ಲಿ ಷಾ ಅವರನ್ನು ಭೇಟಿಯಾದ ಶೋಭಾ, ಕೇರಳದ ಗಡಿ ಪ್ರದೇಶಗಳಲ್ಲಿ ನಡೆಯುತ್ತಿರುವ ವಿದ್ರೋಹಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಕೇರಳದ ತೀವ್ರಗಾಮಿ ಇಸ್ಲಾಮಿಸ್ಟ್ ಗುಂಪುಗಳು ಕರ್ನಾಟಕದ ಗಡಿ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದು ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುತ್ತಿವೆ. ಮಂಗಳೂರು ಪ್ರದೇಶದ ಕಾರ್ಯಕರ್ತರು ಇಸ್ಲಾಮಿಕ್ ಸಂಘಟನೆಗಳಿಂದ ತೀವ್ರ ನಲುಗಿದ್ದಾರೆ ಎಂಬುದಾಗಿ ಅಮಿತ್ ಷಾಗೆ ವಿವರಿಸಿದ್ದಾರೆ.

ಅಲ್ಲದೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ತಡೆಗಟ್ಟಲು ಮತ್ತು ಇಸ್ಲಾಮಿಕ್ ಉಗ್ರರ ಕರಿನೆರಳು ಹೊಂದಿರುವ ಮಂಗಳೂರಿನ ಮೇಲೆ ನಿಗಾ ಇಡಲು ಎನ್ಐಎ ಕಚೇರಿಯನ್ನು ಬೆಂಗಳೂರಿನಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಿಸುವಂತೆ ಅಮಿತ್ ಶಾಗೆ ಸಚಿವೆ ಶೋಭಾ ಮನವಿ ಮಾಡಿದ್ದಾರೆ.
Union minister of state Shobha Karandalaje met union home minister Amit Shah to thank him for handing over the investigation of Praveen Nettaru murder case to NIA. It may be recalled that Karandlaje had written to Shah seeking exemplary punishments to the perpetrators.Shobha Karandalaje, in her meeting with Amit Shah, apprised him of the radical activities taking place in the coastal regions of Karnataka bordering Kerala.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm