ಬ್ರೇಕಿಂಗ್ ನ್ಯೂಸ್
 
            
                        04-08-22 01:39 pm Mangalore Correspondent ಕರಾವಳಿ
 
            ಮಂಗಳೂರು, ಆಗಸ್ಟ್ 4: ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗುವುದು. ಹೊಸ ನಿಯಮ ಆಗಸ್ಟ್ 5ರಿಂದಲೇ ಜಾರಿಗೆ ಬರಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಕಾನೂನು ಸುವ್ಯವಸ್ಥೆ ಬಗ್ಗೆ ಸಮಾಲೋಚನೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಾಳೆಯಿಂದಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಆದರೆ, ಈ ನಿಯಮದಿಂದ 18 ವರ್ಷದಿಂದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಕ್ಕಳಿಗೆ ವಿನಾಯ್ತಿ ನೀಡಲಾಗುವುದು ಎಂದು ಹೇಳಿದ್ದಾರೆ.

ಹಿಂಬದಿ ಸವಾರರಾಗಿ ಯುವಕರು ದ್ವಿಚಕ್ರ ವಾಹನದಲ್ಲಿ ತೆರಳುವಂತಿಲ್ಲ. ಸದ್ಯಕ್ಕೆ ಒಂದು ವಾರ ಅಥವಾ ಹತ್ತು ದಿವಸ ಈ ನಿಯಮ ಜಾರಿಯಲ್ಲಿರುತ್ತದೆ. ಹಿಂದೆ ಬೇರೆ ರಾಜ್ಯದಲ್ಲಿ ಈ ರೀತಿಯ ನಿಮಯ ಜಾರಿಗೆ ತರಲಾಗಿತ್ತು. ಕೇರಳದ ವಯನಾಡಿನಲ್ಲೂ ಈ ರೀತಿ ನಿಯಮ ತರಲಾಗಿತ್ತು. ಈ ರೀತಿ ಮಾಡುವುದರಿಂದ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯ ಎಸಗುವುದನ್ನು ತಡೆಗಟ್ಟಬಹುದು ಎಂದು ಎಡಿಜಿಪಿ ಹೇಳಿದ್ದಾರೆ. ಅಲ್ಲದೆ, ರಾತ್ರಿ ನಿರ್ಬಂಧ ಸಡಿಲಗೊಳಿಸುತ್ತೀರಾ ಎಂಬ ಪ್ರಶ್ನೆಗೆ, ಇಲ್ಲ. ಒಂದೇ ಬಾರಿಗೆ ನಿರ್ಬಂಧ ಸಡಿಲಿಸುವುದಿಲ್ಲ. ಅದರ ಸಮಯ ಮಿತಿಯನ್ನು ಸ್ವಲ್ಪ ಬದಲು ಮಾಡಲಾಗುವುದು. ರಾತ್ರಿ ನಿರ್ಬಂಧ ಮತ್ತು 144 ಸೆಕ್ಷನ್ ಮುಂದುವರಿಸಲಾಗುವುದು ಎಂದು ಹೇಳಿದರು.
 
            
            
            ADGP Alok Kumar orders for No pillon riders on bike from August 5th in Mangalore to avoid untold incidents in Dakshina Kannada. As miscreants use bike for attacks and murder to prevent this this order has been placed as Mangalore witnessed three murders in 10 days time.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             29-10-25 10:43 pm
                        
            
                  
                Mangalore Correspondent    
            
                    
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
 
    ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm