ಬ್ರೇಕಿಂಗ್ ನ್ಯೂಸ್
08-08-22 12:18 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 8: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಇಬ್ಬರು ಆರೋಪಿಗಳನ್ನು ಸುಳ್ಯದ ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿಗಳಿಗೆ ಕರೆದೊಯ್ದು ಪೊಲೀಸರು ಮಹಜರು ನಡೆಸಿದ್ದಾರೆ.
ನಾವೂರಿನ ಆಬಿದ್ ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆಯ ನೌಫಾಲ್ ಅವರನ್ನು ಸುಳ್ಯದ ಆಲೆಟ್ಟಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿಗೆ ಕರೆದೊಯ್ದು ಸುಳ್ಯ ಪೊಲೀಸರು ಮಹಜರು ನಡೆಸಿದ್ದಾರೆ. ಬಂಧಿತ ಆರು ಮಂದಿಯೂ ಪಿಎಫ್ಐ- ಎಸ್ಡಿಪಿಐ ಕಾರ್ಯಕರ್ತರು ಎನ್ನಲಾಗುತ್ತಿದ್ದು, ಇದೇ ಕಚೇರಿಯಲ್ಲಿ ಕುಳಿತು ಸಂಚು ನಡೆಸಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
ಈವರೆಗೆ ಸವಣೂರಿನ ಝಾಕೀರ್, ಬೆಳ್ಳಾರೆಯ ಶಫೀಕ್, ಬೆಳ್ಳಾರೆ ಸಮೀಪದ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ಹಾಗೂ ಹ್ಯಾರಿಸ್ ಅವರನ್ನು ಬಂಧಿಸಲಾಗಿದೆ. ಪ್ರವೀಣ್ ಹತ್ಯೆಯ ಬೆನ್ನಲ್ಲೇ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯವರು ಸಂಚು ಹೆಣೆದು ಕೃತ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರೂ, ಪೊಲೀಸರು ಅದನ್ನು ದೃಢಪಡಿಸಿಲ್ಲ. ಬಂಧಿತರು ಯಾವ ಸಂಘಟನೆಗೆ ಸೇರಿದವರು ಅನ್ನುವುದನ್ನೂ ಹೇಳಿಲ್ಲ. ಆದರೆ ನಿನ್ನೆ ಬಂಧಿತರಾದ ಆಬಿದ್ ಮತ್ತು ನೌಫಾಲ್ ಅವರನ್ನು ಇಂದು ಬೆಳಗ್ಗೆ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್ಐ- ಎಸ್ಡಿಪಿಐ ಕಚೇರಿಗೆ ಒಯ್ದು ಪೊಲೀಸರು ಮಹಜರು ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.
ಬಂಧಿತರು ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ ತಂಡದ ಭಾಗವಾಗಿದ್ದರು ಎಂದಷ್ಟೇ ಜಿಲ್ಲಾ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ. ಆದರೆ, ಕೃತ್ಯದಲ್ಲಿ ನೇರ ಭಾಗಿಯಾಗಿದ್ದವರು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಯಾರು ಕೃತ್ಯ ಎಸಗಿದ್ದಾರೆ ಅವರ ಬಗ್ಗೆ ಖಚಿತ ಮಾಹಿತಿಗಳಿವೆ. ಅವರ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎನ್ನುವ ಮಾಹಿತಿಯನ್ನು ಎಸ್ಪಿ ನೀಡಿದ್ದಾರೆ.
Sullia Praveen Bellare murder case, two accused who were arrested on August 7th from Bellare we're taken to SDPI and PFI office in Sullia for spot mahazar by DK police. It is revealed that the accused planned the plot for the murder of praveen from the SDPI office.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm