ವೆಲೆನ್ಸಿಯಾ ಫ್ಲ್ಯಾಟ್ ನಲ್ಲಿ ವೇಶ್ಯಾವಾಟಿಕೆ ; ಮೂವರ ಬಂಧನ 

04-10-20 11:02 am       Mangaluru Correspondent   ಕರಾವಳಿ

ವೆಲೆನ್ಸಿಯಾದ ಫ್ಲ್ಯಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. 

ಮಂಗಳೂರು, ಅಕ್ಟೋಬರ್ 4: ವೆಲೆನ್ಸಿಯಾದ ಫ್ಲ್ಯಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. 

ಬೆಂಗಳೂರು ಮೂಲದ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಗಣೇಶ್ ಶೆಟ್ಟಿ, ಪ್ಲ್ಯಾಟ್ ಓನರ್ ಅಫೀಜ್ ಮತ್ತು ಸಹಕರಿಸುತ್ತಿದ್ದ ಹರಿಣಾಕ್ಷಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ‌

ಪಾಂಡೇಶ್ವರ ಪೊಲೀಸ್ ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.