ಬ್ರೇಕಿಂಗ್ ನ್ಯೂಸ್
09-08-22 07:17 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಗೆ ಸಹಕಾರ, ಯೋಜನೆ ರೂಪಿಸಿದ ತಂಡದಲ್ಲಿ ಈತನೂ ಭಾಗಿಯಾಗಿದ್ದಾನೆ ಎಂದು ತನಿಖೆಯ ನೇತೃತ್ವ ವಹಿಸಿರುವ ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಮಾಹಿತಿ ನೀಡಿದ್ದಾರೆ.
ಅಬ್ದುಲ್ ಕಬೀರ್ ಸೆರೆಯೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿದೆ. ಈ ಹಿಂದೆ ಆರು ಮಂದಿಯ ಬಂಧನ ಆಗಿತ್ತು. ಎರಡು ದಿನಗಳ ಹಿಂದೆ ನಾವೂರು ನಿವಾಸಿ ಆಬಿದ್(2) ಮತ್ತು ಬೆಳ್ಳಾರೆ ಠಾಣೆ ವ್ಯಾಪ್ತಿಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧನ ಆಗಿತ್ತು. ಅದಕ್ಕೂ ಮುನ್ನ ಪಳ್ಳಿಮಜಲು ನಿವಾಸಿಗಳಾದ ಸದ್ದಾಮ್ ಮತ್ತು ಹ್ಯಾರಿಸ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಕೊಲೆಯಾದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಎಂಬವರನ್ನು ಬಂಧಿಸಲಾಗಿತ್ತು.
ಬಂಧಿತರೆಲ್ಲ ಕೊಲೆಗೆ ಸಂಚು, ಯೋಜನೆ ರೂಪಿಸಿದವರೆಂದು ಪೊಲೀಸರು ಗುರುತಿಸಿದ್ದಾರೆ. ನೇರ ಭಾಗಿಯಾದವರು ಇನ್ನೂ ಪೊಲೀಸರ ಬಲೆಗೆ ಬಿದ್ದಿಲ್ಲ. ಯಾರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ಪೊಲೀಸರಿಗೆ ತಿಳಿದಿದ್ದು ಅವರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆಬಿದ್ ಮತ್ತು ನೌಫಾಲ್, ಕೃತ್ಯ ಎಸಗಲು ಬೈಕ್ ಕೊಟ್ಟು ಸಹಕರಿಸಿದ್ದರು ಎನ್ನಲಾಗುತ್ತಿದೆ. ಕೊಲೆ ಕೃತ್ಯಕ್ಕೆ ಸುಳ್ಯದ ಎಸ್ಡಿಪಿಐ ಕಚೇರಿಯಲ್ಲಿ ಕುಳಿತು ಸಂಚು ರೂಪಿಸಿದ್ದಾರೆ ಎನ್ನಲಾಗುತ್ತಿದ್ದು, ಪೊಲೀಸರು ಆಬಿದ್ ಮತ್ತು ನೌಫಾಲನ್ನು ಕಚೇರಿಗೆ ಒಯ್ದು ಮಹಜರು ನಡೆಸಿದ್ದಾರೆ.
Sullia Praveen bellare murder Seventh accused arrested by Dk Police. The arrested has been identified as Abdul Kabeer.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm