ಬ್ರೇಕಿಂಗ್ ನ್ಯೂಸ್
10-08-22 05:33 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 10: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಹಂತಕರು ಯಾರೆಂದು ಗೊತ್ತಿದೆ, ಅವರ ಫೋಟೋ, ವಿಳಾಸ, ತಂದೆ ತಾಯಿ, ಹೆಂಡತಿ ಯಾರು ಅನ್ನೋದು ಗೊತ್ತಿದೆ. ಅವರ ಬಂಧನಕ್ಕೆ ಪೊಲೀಸರು ಬೆನ್ನು ಬಿದ್ದಿದ್ದು, ಆಗಾಗ ಜಾಗ ಬದಲಾಯಿಸುತ್ತಿದ್ದಾರೆ. ಕೆಲವರು ಬಚ್ಚಿಟ್ಟುಕೊಂಡಿದ್ದಾರೆ. ಆದರೆ ಅವರಿಗೆ ಯಾರು ಸಹಾಯ ಮಾಡುತ್ತಿದ್ದಾರೋ ಅವರ ವಿರುದ್ಧವೂ ಕ್ರಮ ಜರುಗಿಸುತ್ತೇವೆ. ಈಗಾಗಲೇ ಹಂತಕರ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಲು ವ್ಯವಸ್ಥೆ ಮಾಡಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಪ್ರವೀಣ್ ನೆಟ್ಟಾರು ಪ್ರಕರಣ ಸೇರಿದಂತೆ ಕೋಮು ವೈಷಮ್ಯದಿಂದ ಬೂದಿ ಮುಚ್ಚಿದ ಕೆಂಡದಂತಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆ ಪರಿಶೀಲಿಸುವ ನಿಟ್ಟಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮತ್ತೆ ಮಂಗಳೂರಿಗೆ ಬಂದಿದ್ದು, ಬೆಳ್ಳಾರೆಗೆ ತೆರಳಿದ್ದಾರೆ. ಈ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ, ಹಂತಕರ ಬಗ್ಗೆ ಸ್ಪಷ್ಟವಾದ ಮಾಹಿತಿಗಳಿವೆ. ಅವರನ್ನು ಕೆಲವರು ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಅದರ ಬಗ್ಗೆ ನಿಗಾ ಇಟ್ಟಿದ್ದು, ಪತ್ತೆ ಮಾಡುವ ಬಗ್ಗೆ ಚರ್ಚಿಸುವುದಕ್ಕಾಗಿ ಬೆಳ್ಳಾರೆಗೆ ತೆರಳುತ್ತಿದ್ದೇನೆ. ಅಲ್ಲಿ ಆರು ಜಿಲ್ಲೆಗಳ ವ್ಯಾಪ್ತಿಯ ಪೊಲೀಸ್ ವರಿಷ್ಠರ ಜೊತೆ ಚರ್ಚಿಸುತ್ತೇನೆ ಎಂದು ಹೇಳಿದರು.
ಕೋರ್ಟ್ ವಾರೆಂಟ್ ಹೊರಡಿಸಿದ ಬಳಿಕ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವುದು ಇನ್ನಿತರ ಪ್ರಕ್ರಿಯೆ ನಡೆಸಲಾಗುವುದು. ಆ ಬಗ್ಗೆ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸುತ್ತೇನೆ. ಈಗಾಗಲೇ ಎನ್ಐಎ ಅಧಿಕಾರಿಗಳು ಆಗಮಿಸಿದ್ದು, ಜಂಟಿಯಾಗಿ ತನಿಖೆ ನಡೆಸುತ್ತಿದ್ದೇವೆ. ಸದ್ಯಕ್ಕೆ ನಾವು ಒಟ್ಟಾಗಿಯೇ ಪ್ರಕರಣದ ತನಿಖೆ ನಡೆಸುತ್ತಿದ್ದೇವೆ. ಹಸ್ತಾಂತರ ಪ್ರಕ್ರಿಯೆ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಪಿಎಫ್ಐ, ಎಸ್ಡಿಪಿಐ ಸಂಘಟನೆಗಳ ಕಾರ್ಯಕರ್ತರು ಇದ್ದಾರೆಯೇ ಎನ್ನುವ ಬಗ್ಗೆ ಈಗಲೇ ಹೇಳುವಂತಿಲ್ಲ. ಪಿಎಫ್ಐ ಏನೂ ರಿಜಿಸ್ಟರ್ಡ್ ಸಂಸ್ಥೆಯಲ್ಲ. ಯಾವುದೇ ನೋಂದಣಿ ಪ್ರಾಧಿಕಾರದಲ್ಲಿ ನೋಂದಣಿ ಆಗಿಲ್ಲ. ಬಂಧಿತರಲ್ಲಿ ಒಂದಿಬ್ಬರು ಪಿಎಫ್ಐ ಜೊತೆಗೆ ಗುರುತಿಸಿಕೊಂಡಿದ್ದಾರೆಂಬ ಶಂಕೆ ಇದೆ. ಆದರೂ ಈ ಬಗ್ಗೆ ಏನೇನು ಲಿಂಕ್ ಇದೆಯೆಂದು ತನಿಖೆಯ ಬಳಿಕವಷ್ಟೇ ಹೇಳಲು ಸಾಧ್ಯ. ಸದ್ಯಕ್ಕೆ ಬಂಧಿತರಾದವರು ಸ್ಥಳೀಯರೇ ಇದ್ದಾರೆ. ಹಾಗಾಗಿ ಕೇರಳದ ಲಿಂಕ್ ಇದೆಯೇ ಎನ್ನುವ ಬಗ್ಗೆ ಈಗಲೇ ಹೇಳುವುದಕ್ಕೆ ಸಾಧ್ಯ ಆಗುವುದಿಲ್ಲ. ಮುಂದೆ ಅವರಿಗೆ ಯಾರು ಸಹಾಯ ಮಾಡಿದ್ದಾರೆ, ಯಾರು ಬೆಂಬಲಕ್ಕಿದ್ದಾರೆ, ಹತ್ಯೆಗೆ ಯಾರೆಲ್ಲ ನಿರ್ದೇಶನ ಕೊಟ್ಟಿದ್ದರು ಅನ್ನುವ ಬಗ್ಗೆ ತನಿಖೆ ನಡೆಸುತ್ತೇವೆ.
ಸುಳ್ಯದ ಬೆಳ್ಳಾರೆಯಲ್ಲಿ ಏಳೆಂಟು ಜಿಲ್ಲೆಗಳ ಪೊಲೀಸ್ ಪ್ರಮುಖರು ಬಂದಿದ್ದಾರೆ. ಚಾಮರಾಜನಗರ, ಮಂಡ್ಯ, ಕೊಡಗು, ಹಾಸನ, ಉಡುಪಿ ಸೇರಿ ಹಲವು ಜಿಲ್ಲೆಗಳವರು ಬಂದಿದ್ದಾರೆ. ಎಲ್ಲರೂ ಕುಳಿತು ಚರ್ಚೆ ಮಾಡುತ್ತೀವಿ. ಸದ್ಯಕ್ಕೆ ತಲೆಮರೆಸಿಕೊಂಡಿರುವ ಹಂತಕರನ್ನು ಪತ್ತೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು.
Praveen Bellare Murder, Three more to be arrested soon, whereabouts found says ADGP in Mangalore. we have arrested 7 persons so far while three more assailants are yet to be arrested. We have details about the three and will trace them soon. We will conduct a review meeting in Bellare. Action plan will be discussed in the meeting which will be held with 7 to 8 district police officials. Implementation of prohibitory orders will be reviewed. We are probing the case as a team along with the NIA.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm