ಬ್ರೇಕಿಂಗ್ ನ್ಯೂಸ್
16-08-22 08:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಭಕ್ತಿ ಸಾರುವ ನೃತ್ಯ ಪ್ರದರ್ಶನದ ವೇಳೆ ಎಸ್ಡಿಪಿಐ ಕಾರ್ಯಕರ್ತರು ಅಡ್ಡಿಪಡಿಸಿ ಕಾರ್ಯಕ್ರಮ ನಿಲ್ಲಿಸಿದ ಘಟನೆ ಬಗ್ಗೆ ಬಜ್ಪೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಪಿಡಿಓ ಅಬುಬಕ್ಕರ್ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.
ಕಾರ್ಯಕ್ರಮದ ಸಂದರ್ಭ ಪ್ರೇಕ್ಷಕರಾಗಿ ಆಗಮಿಸಿದ್ದ ರಿಯಾಜ್, ಮನ್ಸೂರ್, ಅಶ್ರಫ್, ಶಾಹಿಕ್ ಸೇರಿ ಇತರರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾಗಿ ದೂರು ನೀಡಲಾಗಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 340, 353 ಮತ್ತು 149 ಅಡಿ ಪ್ರಕರಣ ದಾಖಲಿಸಲಾಗಿದೆ. ಸೋಮವಾರ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗುರುಪುರ ಪಂಚಾಯತ್ ವತಿಯಿಂದ ಮುಳೂರಿನಲ್ಲಿ ಕಚೇರಿ ಎದುರುಗಡೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ ಬೆಥನಿ ಶಾಲಾ ಮಕ್ಕಳು ದೇಶಭಕ್ತಿ ಸಾರುವ ಹಿಂದಿ ಗೀತೆಯನ್ನು ನೃತ್ಯ ರೂಪಕದ ಮೂಲಕ ಪ್ರಸ್ತುತ ಪಡಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಭಾರತದ ಭೂಪಟದಲ್ಲಿ ಹಲವು ಸ್ವಾತಂತ್ರ್ಯ ಸೇನಾನಿಗಳ ಫೋಟೋ ಪ್ರದರ್ಶನ ಮಾಡಲಾಗಿತ್ತು.
ಇದರಲ್ಲಿ ಸಾವರ್ಕರ್ ಫೋಟೋ ಯಾಕೆ ಪ್ರದರ್ಶನ ಮಾಡಿದ್ದೀರೆಂದು ಅಲ್ಲಿ ಸೇರಿದ್ದ ಎಸ್ಡಿಪಿಐ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಶಾಲಾ ಶಿಕ್ಷಕರು ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಕಾರ್ಯಕ್ರಮಕ್ಕೆ ತಮ್ಮಿಂದಾಗಿ ಅಡ್ಡಿಯಾಗುವುದು ಬೇಡವೆಂದು ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ. ಆದರೆ, ಇದರಿಂದಾಗಿ ಸರಕಾರಿ ಕಾರ್ಯಕ್ರಮದಲ್ಲಿ ಸಾರ್ವಜನಿಕರ ನಡುವೆ ಭೇದ ಉಂಟು ಮಾಡಿದಂತಾಗಿದ್ದು, ಸ್ವಾತಂತ್ರ್ಯ ಯೋಧರನ್ನು ಅವಮಾನಿಸಲಾಗಿತ್ತು. ಘಟನೆ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಭಾರೀ ಆಕ್ರೋಶ ಕೇಳಿಬಂದಿದ್ದರಿಂದ ಆರೋಪಿಗಳ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಪೊಲೀಸರಿಗೆ ಮತ್ತು ಪಂಚಾಯತ್ ಸಿಬಂದಿಗೆ ಆಗ್ರಹ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ಪಂಚಾಯತ್ ಪಿಡಿಓ ಪೊಲೀಸರಿಗೆ ದೂರು ನೀಡಿದ್ದಾರೆ.
Savarkar banner row in Surathkal Mangalore, case filed against SDPI members at Bajpe station. During the independence day celebration students displayed Savarkar photo after which SDPI members created controversy.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm