ಬ್ರೇಕಿಂಗ್ ನ್ಯೂಸ್
16-08-22 09:20 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 16: ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ದೆಹಲಿ ಕೇಂದ್ರ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ವಾರದ ಹಿಂದೆ ಮೊದಲ ನಾಲ್ವರು ಆರೋಪಿಗಳನ್ನು ಬಂಧಿಸಿದ ಬೆನ್ನಲ್ಲೇ ದೆಹಲಿಯ ಎನ್ಐಎ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಜಾಕೀರ್, ಮಹಮ್ಮದ್ ಶಫೀಕ್, ಶೇಕ್ ಸದ್ದಾಂ ಮತ್ತು ಅಬ್ದುಲ್ ಹ್ಯಾರಿಸ್ ಹೆಸರನ್ನು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಅದರ ಬೆನ್ನಲ್ಲೇ ಎನ್ಐಎ ಅಧಿಕಾರಿಗಳು ಪುತ್ತೂರು, ಸುಳ್ಯದಲ್ಲಿ ತನಿಖೆಯನ್ನೂ ಕೈಗೊಂಡಿದ್ದರು. ಆರೋಪಿಗಳ ವಿರುದ್ಧ ಯುಎಪಿಎ ಕಾಯ್ದೆ 16 ಮತ್ತು 18ರಡಿ ಕೇಸು ದಾಖಲಾಗಿದೆ.

ಎಫ್ಐಆರ್ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದು ದೆಹಲಿಗೆ ಒಯ್ಯುವ ಸಾಧ್ಯತೆಯಿದೆ. ಸ್ಥಳೀಯರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಪ್ರವೀಣ್ ನೆಟ್ಟಾರು ಹತ್ಯೆ ನಡೆಸಲಾಗಿದೆ ಎನ್ನುವ ಅಂಶವನ್ನು ಎಫ್ಐಆರ್ ನಲ್ಲಿ ಉಲ್ಲೇಖ ಮಾಡಿದ್ದಾರೆ ಎನ್ನಲಾಗುತ್ತಿದ್ದು, ಹೀಗಾಗಿ ಕೊಲೆ ಕೃತ್ಯವನ್ನು ಭಯೋತ್ಪಾದಕ ಕೃತ್ಯದಂತೆ ಬಿಂಬಿಸುವ ಸಾಧ್ಯತೆಯಿದೆ. ಈಗಾಗಲೇ ಹತ್ತು ಮಂದಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದು, ಕೊನೆಯ ಮೂವರು ಹತ್ಯೆ ಸಂಚು ಮತ್ತು ಕೃತ್ಯದಲ್ಲಿ ನೇರ ಶಾಮೀಲಾದವರು. ಶಿಹಾಬುದ್ದೀನ್(33), ರಿಯಾಜ್(27) ಮತ್ತು ಬಶೀರ್ ಎಲಿಮಲೆ ಪ್ರಮುಖರಾಗಿದ್ದು, ಅವರನ್ನೇ ಗುರಿಯಾಗಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.
ಕಳೆದ ಐದು ದಿನಗಳ ಕಾಲ ಮೂವರನ್ನು ಕಸ್ಟಡಿಗೆ ಪಡೆದು ಪೊಲೀಸರು ತನಿಖೆ ನಡೆಸಿದ್ದಾರೆ. ಆಗಸ್ಟ್ 16ಕ್ಕೆ ಕಸ್ಟಡಿ ಅವಧಿ ಮುಗಿದಿದ್ದರಿಂದ ಮಂಗಳವಾರ ಸುಳ್ಯ ಕೋರ್ಟಿಗೆ ಹಾಜರುಪಡಿಸಿದ್ದು ಮೂವರನ್ನು ಆಗಸ್ಟ್ 24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ನಡುವೆ, ಎನ್ಐಎ ಅಧಿಕಾರಿಗಳು ವಿಚಾರಣೆಗಾಗಿ ವಶಕ್ಕೆ ಪಡೆಯುವ ಸಾಧ್ಯತೆಯಿದ್ದು, ಆರೋಪಿಗಳನ್ನು ದೆಹಲಿಗೆ ಒಯ್ಯುತ್ತಾರೆಯೇ ಇಲ್ಲೇ ತನಿಖೆ ನಡೆಸುತ್ತಾರೆಯೇ ಎನ್ನುವ ಕುತೂಹಲ ಇದೆ. ದೆಹಲಿಯಲ್ಲಿ ಎಫ್ಐಆರ್ ಆಗಿರುವುದರಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ಜಾರಿಗೊಳಿಸುವ ಸಾಧ್ಯತೆಯೇ ಹೆಚ್ಚು. ಯಾವುದೇ ಪ್ರಕರಣ ಎನ್ಐಎ ತನಿಖೆಗೆ ಒಪ್ಪಿಸಿದಲ್ಲಿ ಕರಾರುವಾಕ್ ತಾಂತ್ರಿಕ ಸಾಕ್ಷ್ಯಗಳ ಕಾರಣ 99 ಶೇಕಡಾ ಪ್ರಕರಣಗಳಲ್ಲಿ ಶಿಕ್ಷೆಯಾಗಿರುವುದು ಎನ್ಐಎ ತನಿಖೆ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.
NIA registers FIR against Praveen Bellare murder accused, soon to take them to custody says sources. The main three accused in this case are identified as Shiyabuddin(33), a cocoa supplier from Sullia taluk, Riyaz (27), a chicken supplier from Ankathadka and Basheer (29), a hotel worker from Elimale near Subrahmanya. All three are locals and had allegedly committed the murder before fleeing to Kerala. They had used two bikes and four cars to commit the crime.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am