ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು ; ಫಾಜಿಲ್ ಕೊಲೆ ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಹಾಕಲ್ಲವೇ ಎಂದು ಎಡಿಜಿಪಿಗೆ ಖಾದರ್ ಪತ್ರ ! 

17-08-22 01:00 pm       Mangalore Correspondent   ಕರಾವಳಿ

ಕೊಲೆಯಾದ ಫಾಝಿಲ್ ಮತ್ತು ಮಸೂದ್ ಪ್ರಕರಣದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವ ವಿಚಾರದಲ್ಲಿ ಮೌನ ವಹಿಸಿದ್ದೀರಿ ಏಕೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದಾರೆ.

ಮಂಗಳೂರು, ಆಗಸ್ಟ್ 17: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಹೇಳಿದ್ದೀರಿ. ತಮ್ಮ ಈ ರೀತಿಯ ನಡೆಯನ್ನು ಸ್ವಾಗತಿಸುತ್ತೇನೆ. ‌ಆದರೆ ಇದೇ ವೇಳೆ ಕೊಲೆಯಾದ ಫಾಝಿಲ್ ಮತ್ತು ಮಸೂದ್ ಪ್ರಕರಣದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವ ವಿಚಾರದಲ್ಲಿ ಮೌನ ವಹಿಸಿದ್ದೀರಿ ಏಕೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದಾರೆ.

B'luru city police commissioner Alok Kumar transferred | Deccan Herald

ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ ಕುಮಾರ್‌ ಇತ್ತೀಚೆಗೆ ಮಂಗಳೂರಿಗೆ ಬಂದಿದ್ದಾಗ ಪ್ರವೀಣ್ ಕೊಲೆ ಪ್ರಕರಣದ ಆರೋಪಿಗಳು ಯಾರೆಂದು ಗೊತ್ತು. ಪೊಲೀಸರ ಕೈಗೆ ಸಿಗದೇ ಇದ್ದರೆ ಕೋರ್ಟಿನಿಂದ ವಾರೆಂಟ್ ಹೊರಡಿಸಿ ಅವರ ಆಸ್ತಿ ಮುಟ್ಟುಗೋಲು ಹಾಕುತ್ತೇವೆ ಎಂದಿದ್ದರು. ಈ ಬಗ್ಗೆ ಆಕ್ಷೇಪಿಸಿ ಪತ್ರ ಬರೆದಿರುವ ಖಾದರ್, ಪ್ರವೀಣ್ ಮತ್ತು ಫಾಜಿಲ್ ಎರಡೂ ಪ್ರಕರಣವನ್ನು ಸಮಾನ ರೀತಿಯಲ್ಲಿ ನೋಡಬೇಕು. ಇದು ನಾಗರಿಕ ಸಮಾಜದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ. ಸಾರ್ವಜನಿಕರ ಅನುಮಾನ ಬಗೆಹರಿಸಿ, ಪೊಲೀಸ್‌ ಇಲಾಖೆಯ ಮೇಲೆ ವಿಶ್ವಾಸ ಬರುವಂಥ ಉತ್ತರವನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ ಎಂದಿದ್ದಾರೆ.

Dakshina Kannada: BJP youth wing leader hacked to death in Bellare, CM  condemns killing

Restrictions stay, Mangaluru tense after Muslim man's murder | Latest News  India - Hindustan Times

ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಆರೋಪಿಗಳನ್ನು ಬಂಧಿಸಲು, ಅವರನ್ನು ಕಾನೂನು ಕ್ರಮಕ್ಕೆ ಒಳಪಡಿಸಲು ಮತ್ತು ಕೊಲೆಗಳ ಸರಣಿ ಮುಂದುವರಿಯದಂತೆ ತಡೆಯಲು ಪೊಲೀಸ್ ಇಲಾಖೆ ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಕೊಲೆ, ಸಮಾಜದಲ್ಲಿ ಭಯವನ್ನು ಹುಟ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಎಲ್ಲರ ಬೆಂಬಲ ಇದೆ. ಪ್ರವೀಣ್ ಪ್ರಕರಣಕ್ಕೆ ಸಂಬಂಧಿಸಿ ಕೈಗೊಂಡ ದಿಟ್ಟ ಕ್ರಮವನ್ನು ಫಾಝಿಲ್, ಮಸೂದ್ ಪ್ರಕರಣಕ್ಕೂ ಅನ್ವಯಿಸಬೇಕು' ಎಂದು ಖಾದರ್ ಆಗ್ರಹಿಸಿದ್ದಾರೆ.

Confiscate property of accused in Praveen Bellare murder why not in Masood case questions MLA Khader by letter to ADGP Alok Kumar.