ಸಿಬಿಐ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ, ಮಿಥುನ್ ರೈ ಸೇರಿ ಹಲವರು ವಶಕ್ಕೆ

05-10-20 01:30 pm       Mangalore Correspondent   ಕರಾವಳಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಸೇರಿದ ಕಾರ್ಯಕರ್ತರು ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೂರಾರು ಕಾರ್ಯಕರ್ತರು ದಿಢೀರ್ ಆಗಿ ರಸ್ತೆ ತಡೆ ನಡೆಸಿದ್ದಲ್ಲದೆ, ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಾರೆ.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ಅನುಮತಿ ಪಡೆಯದೆ ರಸ್ತೆ ತಡೆ ನಡೆಸಿದ್ದಕ್ಕಾಗಿ ಪೊಲೀಸರು ಮಿಥುನ್ ರೈ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು. ಈ ವೇಳೆ, ಕೆಲವು ಕಾರ್ಯಕರ್ತರು ರಸ್ತೆಯಲ್ಲಿ ಟೈಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

 

ಕೊರೊನಾ ಫ್ರೀ ಪ್ರತಿಭಟನೆ !

ಪ್ರತಿಭಟನೆ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರೂ ಯಾರೊಬ್ಬರೂ ಮುಖಕ್ಕೆ ಮಾಸ್ಕ್ ಹಾಕಿರಲಿಲ್ಲ. ಸರಕಾರದ ನಿಯಮ ಪ್ರಕಾರ, ಮಾಸ್ಕ್ ಹಾಕದೆ ಜನ ಸೇರುವಂತಿಲ್ಲ. ಕೊರೊನಾ ತೀವ್ರ ರೀತಿಯಲ್ಲಿ ಹರಡುತ್ತಿರುವ ಕಾರಣ ಮಾಸ್ಕ್ ಧರಿಸುವುದನ್ನು ಮಹಾನಗರ ಪಾಲಿಕೆ ಕಡ್ಡಾಯಗೊಳಿಸಿದೆ. ಅಲ್ಲದೆ, ಮಾಸ್ಕ್ ಹಾಕದೆ ತಿರುಗಾಡುವ ಸಾರ್ವಜನಿಕರ ವಿರುದ್ಧ ಮಹಾನಗರ ಪಾಲಿಕೆ ದಂಡವನ್ನೂ ವಿಧಿಸುತ್ತಿದೆ. ಪ್ರತಿಭಟನಕಾರರು ಮಾತ್ರ ಮಾಸ್ಕನ್ನೂ ಹಾಕಿಲ್ಲ, ಅಂತರವನ್ನೂ ಕಾಯ್ದುಕೊಂಡಿರಲಿಲ್ಲ. 

Video :