ಬ್ರೇಕಿಂಗ್ ನ್ಯೂಸ್
05-10-20 02:16 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05: ಪ್ರಸಿದ್ಧ ಮಂಗಳೂರು ದಸರಾ ಉತ್ಸವವನ್ನು ಗರಿಷ್ಠ ಸುರಕ್ಷಾ ಕ್ರಮಗಳೊಂದಿಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ನಡೆಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ನಿರ್ಧರಿಸಿದೆ.
ದಸರಾ ಉತ್ಸವ ಆಚರಣೆ ಕುರಿತು ಕುದ್ರೋಳಿ ಕ್ಷೇತ್ರದ ಸಭಾಭವನದಲ್ಲಿ ಭಾನುವಾರ ಆಹ್ವಾನಿತರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಮಂಗಳೂರು ದಸರಾವನ್ನು ಕೊರೊನಾದಿಂದಾಗಿ ಹಿಂದಿನಂತೆ ವೈಭವದಿಂದ ನಡೆಸಲು ಸಾಧ್ಯವಿಲ್ಲ. ‘ನಮ್ಮ ದಸರಾ - ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯ ಮುಂದಿಟ್ಟು ಉತ್ಸವ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಎಲ್ಲ ಭಕ್ತರಿಗೆ ಮಾಸ್ಕ್ ಕಡ್ಡಾಯಗೊಳಿಸಿ, ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್‌ಗೆ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಪ್ರತಿನಿತ್ಯ 150ರಿಂದ 200 ಜನರ ಸ್ವಯಂಸೇವಕರ ತಂಡ ರಚಿಸಲಾಗುವುದು ಎಂದರು.
ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಮಾತನಾಡಿ, ಪೂಜೆ, ಪ್ರಸಾದ ವಿತರಣೆ, ಮಕ್ಕಳು, ಹಿರಿಯರ ಸುರಕ್ಷತೆ ಸೇರಿ ಪ್ರತಿ ವಿಚಾರ ಗಮನದಲ್ಲಿಟ್ಟು ಕ್ಷೇತ್ರದ ಆಡಳಿತ ಮಂಡಳಿ ನಿರ್ಧಾರ ತೆಗೆದುಕೊಳ್ಳಲಿದೆ. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಂತೆ ದಸರಾ ಮಹೋತ್ಸವ ನಡೆಯಲಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಜೊತೆಗೆ ಸಂಪ್ರದಾಯಕ್ಕೆ ಧಕ್ಕೆ ಬರದಂತೆ ಉತ್ಸವ ನಡೆಸಲಾಗುವುದು. ಆದರೆ ಈ ಬಾರಿ ದಸರಾ ಮೆರವಣಿಗೆ ಇರುವುದಿಲ್ಲ ಎಂದರು.

ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರವಿಶಂಕರ್ ಮಿಜಾರ್ ಮಾತನಾಡಿ, ಕರೊನಾ ಸಂಕಷ್ಟ ಮಧ್ಯೆಯೂ ಸಂಪ್ರದಾಯ ಪ್ರಕಾರ ದೇವರ ಸೇವೆ ನಡೆಸುವುದು ಅನಿವಾರ್ಯ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಆಗಮನ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದರು.
ಉದ್ಯಮಿ ಶೈಲೇಂದ್ರ ಸುವರ್ಣ, ಕ್ಷೇತ್ರದ ಅಭಿವೃದ್ಧಿ ಸಮಿತಿ ಸದಸ್ಯ ರಮಾನಾಥ್ ಕಾರಂದೂರು, ರಾಧಾಕೃಷ್ಣ ಅಶೋಕನಗರ, ದೇವೇಂದ್ರ ಪೂಜಾರಿ, ಶೇಖರ್ ಪೂಜಾರಿ, ಲೀಲಾಕ್ಷ ಕರ್ಕೇರ ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm