ಕೊರೊನಾ ಸೋಂಕಿಗೆ ಒಳಗಾಗಿದ್ದ ರಹೀಂ ಉಚ್ಚಿಲ್ ಸ್ಥಿತಿ ಗಂಭೀರ ; ಐಸಿಯುನಲ್ಲಿ ಚಿಕಿತ್ಸೆ 

05-10-20 02:39 pm       Mangaluru Correspondent   ಕರಾವಳಿ

ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಮಂಗಳೂರು, ಅಕ್ಟೋಬರ್ 5: ವಾರದ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಕೊರೊನಾ ಸೋಂಕು ಶ್ವಾಸಕೋಶ ಮತ್ತು ಹೃದಯಕ್ಕೆ ಹರಡಿದ್ದು ಇದರಿಂದಾಗಿ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಅವರನ್ನು ವೈದ್ಯರ ತಂಡ ತೀವ್ರ ನಿಗಾದಲ್ಲಿ ನೋಡಿಕೊಳ್ಳುತ್ತಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ. 

ಈ ಹಿಂದೆ ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾಗಿದ್ದ ರಹೀಂ ಉಚ್ಚಿಲ್ ಅವರನ್ನು ಇತ್ತೀಚೆಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ನೇಮಿಸಲಾಗಿತ್ತು.