ಬ್ರೇಕಿಂಗ್ ನ್ಯೂಸ್
24-08-22 11:43 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ಮಂಗಳೂರಿನಲ್ಲಿ ರಸ್ತೆ ಗುಂಡಿಗಳಿಂದ ಪ್ರಾಣಾಪಾಯ ಹೆಚ್ಚುತ್ತಿದೆ. ಇದೇ ವೇಳೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಸ್ತೆ ಗುಂಡಿ ಬಗ್ಗೆ ಗಮನ ಸೆಳೆಯಲು ಸ್ಪರ್ಧೆ ಹಮ್ಮಿಕೊಂಡಿದ್ದಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳ ಅಪಾಯಕಾರಿ ಗುಂಡಿಗಳ ಛಾಯಾಚಿತ್ರಗಳನ್ನು ವಾಟ್ಸಪ್ ಮೂಲಕ 9731485875 ನಂಬರ್ಗೆ ಕಳುಹಿಸಿ, 5,000 ರೂ. ಬಹುಮಾನ ಗೆಲ್ಲಿ ಎಂದು ಸ್ಪರ್ಧೆ ಏರ್ಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಐವನ್ ಡಿ’ಸೋಜ, ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳೇ ಜಾಸ್ತಿಯಾಗಿದ್ದು ಅಮಾಯಕರು ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ, ಮಹಾನಗರ ಪಾಲಿಕೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಆಡಳಿತ ವಿರೋಧಿಸಿ ಸರ್ಕಾರದ ಗಮನ ಸೆಳೆಯಲು ರಸ್ತೆ ಗುಂಡಿಗಳ ಬಗ್ಗೆಯೇ ಫೋಟೊ ಸ್ಪರ್ಧೆ ಆಯೋಜಿಸಿದ್ದೇವೆ ಎಂದರು.

ಸ್ಪರ್ಧೆ ಆ.24 ರಿಂದ ಆ.28ರ ಸಂಜೆ 5 ಗಂಟೆಯ ವರೆಗೆ ನಡೆಯಲಿದೆ. ಮಂಗಳೂರು ನಗರದ ಸ್ಮಾರ್ಟ್ ಸಿಟಿ ವ್ಯಾಪ್ತಿಯ ಅತ್ಯಂತ ದೊಡ್ಡ ಮತ್ತು ಅಪಾಯಕಾರಿ ಗುಂಡಿ ಗುರುತಿಸಿದ ಮೂವರು ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.


ಪ್ರಥಮ ಬಹುಮಾನವನ್ನು ದ.ಕ ಜಿಲ್ಲಾ ಕಾರ್ಮಿಕ ಪರಿಷತ್ ಬಸ್ ಸಂಘದ ನೌಕರರ ವತಿಯಿಂದ 5 ಸಾವಿರ ರೂ., ದ್ವಿತೀಯ ಬಹುಮಾನ ತ್ರಿಚಕ್ರ, ಗೂಡ್ಸ್, ಟೆಂಪೋ ಮಾಲಕ/ಚಾಲಕರ ಸಂಘದ ವತಿಯಿಂದ 3 ಸಾವಿರ ರೂ, ತೃತೀಯ ಬಹುಮಾನವಾಗಿ ಕುಲಶೇಖರ ಮಹಿಳಾ ದ್ವಿಚಕ್ರ ವಾಹನ ಚಾಲಕ/ಮಾಲಕರ ಪರವಾಗಿ 2 ಸಾವಿರ ರೂ. ನೀಡಲು ತೀರ್ಮಾನಿಸಿದ್ದೇವೆ. ಗುಂಡಿ ಸ್ಪರ್ಧೆಯಲ್ಲಿ ಭಾಗವಹಿಸುವವರು 9731485875 ವಾಟ್ಸಪ್ ಸಂಖ್ಯೆಗೆ ಗುಂಡಿಗಳ ಚಿಕ್ಕ ವೀಡಿಯೋ, ಫೋಟೋ ಮತ್ತು ಜಿಪಿಎಸ್ ಲೊಕೇಷನ್ ಅನ್ನು ಕಳುಹಿಸಿಕೊಡತಕ್ಕದ್ದು, ಇದು ಮನೋರಂಜನೆಗೆ ಅಲ್ಲ, ಜನಜಾಗೃತಿ ಕಾರ್ಯಕ್ರಮ. ಆ.30 ರಂದು ಪಾಲಿಕೆ ಕಚೇರಿ ಮುಂದೆ ಬಹುಮಾನ ವಿತರಿಸಲಾಗುವುದು ಎಂದು ಹೇಳಿದ್ದಾರೆ.
Worst potholes in Mangalore send WhatsApp pictures and get price money of 5000 Rs says congress leader Ivan Dsouza.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm