ಬ್ರೇಕಿಂಗ್ ನ್ಯೂಸ್
25-08-22 03:32 pm HK News Desk ಕರಾವಳಿ
ಮಂಗಳೂರು, ಆಗಸ್ಟ್ 25: ಕರಾವಳಿಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಹೊತ್ತಿಕೊಂಡಿರುವ ಬಿಜೆಪಿ ಕಾರ್ಯಕರ್ತರ ಆಕ್ರೋಶ ಮತ್ತೆ ಉಲ್ಬಣಗೊಂಡಿದೆ. ಪ್ರಧಾನಿ ಮೋದಿ ಕರಾವಳಿಗೆ ಆಗಮಿಸುವ ಹೊತ್ತಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ಆಕ್ರೋಶ ಕೇಳಿಬಂದಿದ್ದು, ಬಿಜೆಪಿ ಕಾರ್ಯಕರ್ತರೇ ಸಂಸದರ ಬದಲಾವಣೆಯ ಕೂಗು ಹಾಕಿದ್ದಾರೆ.
ಮೋದಿಜೀ ಮಂಗಳೂರಿಗೆ ಬರುತ್ತಿದ್ದಾರೆ, ವಿಶ್ವ ನಾಯಕನನ್ನು ಸ್ವಾಗತಿಸುವ ಜೊತೆಗೆ ದುರ್ಬಲ ಸಂಸದ, ರಾಜ್ಯಾಧ್ಯಕ್ಷರನ್ನು ಬದಲಾಯಿಸಲು ಒತ್ತಾಯಿಸೋಣ.. ಮಂಗಳೂರನ್ನು ದೇಶದ ನಂಬರ್ ವನ್ ಪ್ರವಾಸೋದ್ಯಮ ಸ್ಥಳವನ್ನಾಗಿ ಪರಿವರ್ತಿಸಲು ಸಂಸದರ ಬದಲಾವಣೆ ಅತ್ಯಗತ್ಯ. ನಿಮಗೆ ಗೊತ್ತಿರುವ ಎಲ್ಲಾ ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಒತ್ತಾಯ ಮಾಡೋಣ ಎಂದು ನಮೋ ಕರುನಾಡು ಎಂಬ ಫೇಸ್ಬುಕ್ ಪೇಜ್ ನಲ್ಲಿ ಬರೆಯಲಾಗಿದೆ. ಇದಲ್ಲದೆ, ನಾವು ಮಂಗಳೂರಿಗರು ದೇಶದಲ್ಲೇ ಹಿಂದುತ್ವದ ಭದ್ರಕೋಟೆಯಾಗಿ ಕರಾವಳಿಯನ್ನು ಕಟ್ಟಿಕೊಂಡವರು. ನಮಗೆ ಹಿಂದುತ್ವದ ಜೊತೆಗೆ ಕರಾವಳಿಯ ಅಭಿವೃದ್ಧಿಯ ದೃಷ್ಟಿಕೋನ ಹೊಂದಿರುವ ನಾಯಕನ ಅಗತ್ಯವಿದೆ. ಮೋದಿಯನ್ನು ಸ್ವಾಗತಿಸುವ ಮೊದಲು ನಮ್ಮ ಜಿಲ್ಲೆಯ ಸಂಸದರ ಬದಲಾವಣೆಯ ಕೂಗು ಕೇಳಿಬರಲಿ ಎಂದು ಪೋಸ್ಟ್ ಕಾರ್ಡ್ ಕನ್ನಡ ಎಂಬ ಇನ್ನೊಂದು ಪೇಜಿನಲ್ಲಿ ಬರೆಯಲಾಗಿದೆ.
ಇವೆರಡೂ ಪೋಸ್ಟ್ ಗಳನ್ನು ಮೂಡುಬಿದ್ರೆ ಮೂಲದ ಮಹೇಶ್ ವಿಕ್ರಂ ಹೆಗ್ಡೆ ಅವರು ಜಾಲತಾಣದಲ್ಲಿ ಹಾಕಿದ್ದಾರೆ. ಕರುನಾಡು ಮತ್ತು ಪೋಸ್ಟ್ ಕಾರ್ಡ್ ವೆಬ್ ಗಳನ್ನು ಮಹೇಶ್ ಹೆಗ್ಡೆ ನಿರ್ವಹಿಸುತ್ತಿದ್ದು, ಇವರಿಗೆ ರಾಜ್ಯಾದ್ಯಂತ ಭಾರೀ ಸಂಖ್ಯೆಯಲ್ಲಿ ಫಾಲೋವರ್ ಇದ್ದಾರೆ. ಬಿಜೆಪಿ ಮತ್ತು ಮೋದಿ ಪರ ಪ್ರಚಾರಕ ಎಂದು ಗುರುತಿಸಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಪ್ರಧಾನಿ ಮೋದಿಯೇ ಇವರನ್ನು ಫಾಲೋ ಮಾಡುತ್ತಿದ್ದಾರೆ ಅನ್ನುವುದು ಇವರ ಹೆಗ್ಗಳಿಕೆ.
ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಂಸದರ ಬದಲಾವಣೆಯ ಕೂಗು ಕೇಳಿಬಂದಿದೆ. ಸಂಸದ ನಳಿನ್ ಕುಮಾರ್ ಅವರ ಅಧಿಕೃತ ಫೇಸ್ಬುಕ್ ಪೇಜ್ ನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೋದಿ ಕಾರ್ಯಕ್ರಮಕ್ಕೆ ತಯಾರಿ ನಡೆಯುತ್ತಿರುವ ಬಗೆಗಿನ ಫೋಟೋ ಪೋಸ್ಟ್ ಮಾಡಿದ್ದ ವಿಚಾರದಲ್ಲಿ ಪರ- ವಿರೋಧ ಜಗ್ಗಾಟ ನಡೆದಿದೆ. ಬಿಜೆಪಿ ಕಾರ್ಯಕರ್ತರಲ್ಲಿಯೇ ಒಡಕು ಉಂಟಾಗಿದ್ದು, ಹಲವರು ಸತ್ಯಜಿತ್ ಸುರತ್ಕಲ್ ಪರವಾಗಿ ಜೈಕಾರ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಕೆಲವು ಕಾರ್ಯಕರ್ತರು ನಳಿನ್ ಕುಮಾರ್ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಮೋದಿ ಎದುರಲ್ಲೇ ನಳಿನ್ ಕುಮಾರ್ ಹಠಾವೋ ಘೋಷಣೆ ಮೊಳಗಿಸಲು ರೆಡಿಯಾಗುತ್ತಿದ್ದೇವೆ ಎಂದು ಕೆಲವರು ಬರೆದುಕೊಂಡಿದ್ದಾರೆ.
ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ರಾಜ್ಯಾಧ್ಯಕ್ಷರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ರಾಜ್ಯಾಧ್ಯಕ್ಷರ ಕಾರನ್ನು ಜಗ್ಗಾಡುವುದು, ಕಾರ್ಯಕರ್ತರು ಧಿಕ್ಕಾರ ಕೂಗಿದ್ದು ರಾಜ್ಯದಲ್ಲಿ ಸಂಚಲನ ಉಂಟುಮಾಡಿತ್ತು. ಪ್ರವೀಣ್ ಗೆ ಕೊಲೆ ಬೆದರಿಕೆ ಇದ್ದರೂ, ನಿರ್ಲಕ್ಷ್ಯ ವಹಿಸಿದ್ದಾರೆಂಬ ಆರೋಪದಲ್ಲಿ ಎದ್ದಿದ್ದ ಆಕ್ರೋಶ ಈಗ ಸಂಸದರ ಕುರ್ಚಿಯನ್ನೇ ಅಲುಗಾಡಿಸುವಷ್ಟರ ಮಟ್ಟಿಗೆ ಬೆಳೆದಿದೆ. ಜಾಲತಾಣದಲ್ಲಿ ನಳಿನ್ ಬದಲು ಸಂಸದರ ಸ್ಥಾನಕ್ಕೆ ಸತ್ಯಜಿತ್ ಸುರತ್ಕಲ್ ಪರವಾಗಿ ಜೈಕಾರ ಹಾಕುವ ಬೆಳವಣಿಗೆ ನಡೆದಿದೆ. ನಳಿನ್ ಕುಮಾರ್ ಸಂಸದ ಮತ್ತು ರಾಜ್ಯಾಧ್ಯಕ್ಷರ ಹುದ್ದೆಯಲ್ಲಿದ್ದರೂ, ಅವರದೇ ಕ್ಷೇತ್ರದಲ್ಲಿ ಕಾರ್ಯಕರ್ತರು ಈ ರೀತಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಬಿಜೆಪಿ ಪಾಲಿಗೆ ದೊಡ್ಡ ಇರಿಸುಮುರಿಸು ಆಗುವಂತಾಗಿದೆ. ಮೋದಿ ಎದುರಲ್ಲೇ ವಿರೋಧಿ ಘೋಷಣೆ ಮೊಳಗಿದರೆ, ಚುನಾವಣೆ ಕಾಲದಲ್ಲಿ ದೊಡ್ಡ ಹಿನ್ನಡೆಯೂ ಆಗಲಿದೆ.
— Postcard Kannada (@PostcardKannada) August 23, 2022
BJP chief Nalin Kumar Kateel slammed on Post card as modi to arrive to Mangalore on Sep 2nd. The post card run by vikram hedge has begun a campaign stating to remove Nalin from BJP state president post as no work progress has been done so far in Dakshina Kannada.
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm