ಬ್ರೇಕಿಂಗ್ ನ್ಯೂಸ್
31-08-22 01:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31 : ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿ, ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಿಚಾರಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿರುವುದು, ಕೆಲವು ವ್ಯಕ್ತಿಗಳ ಫೋಟೊಗಳನ್ನು ಮಾರ್ಕ್ ಮಾಡಿ ಹಂಚುತ್ತಿರುವುದು, ಆಕ್ಷೇಪಾರ್ಹ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ನಲ್ಲಿ ಹಂಚುತ್ತಿರುವ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಯಾರು ಇಂತಹ ಬರಹ, ಅನಪೇಕ್ಷಿತ ವಿಚಾರಗಳನ್ನು ಷೇರ್ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಿಗಾ ಇಟ್ಟಿದ್ದೇವೆ. ಇಬ್ಬರನ್ನು ವಶಕ್ಕೆ ಪಡೆಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಿರುವುದು, ಪ್ರಧಾನಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ್ದೇವೆ. ಗೊಂದಲ ಉಂಟು ಮಾಡುವುದಕ್ಕೆಂದೇ ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದೆ. ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ. ಯಾವುದೇ ಪೋಸ್ಟ್ ಅಪರಾಧಕ್ಕೆ ಕಾರಣವಾಗಬಲ್ಲ ವಿಚಾರ, ಗೊಂದಲಕ್ಕೀಡು ಮಾಡುವಂತಿದ್ದಲ್ಲಿ ಅಂತಹ ಪೋಸ್ಟ್ ಬಗ್ಗೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅಂತಹ ವ್ಯಕ್ತಿಗಳಿಂದ ಶೂರಿಟಿ ಬಾಂಡ್ ಪಡೆಯಲಿದ್ದೇವೆ. ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
![]()
ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಸೆಕ್ಷನ್ 107, 110 ಅಡಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಕಮೀಷನರ್ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್ ಹಂಚಿಕೆ ಬಗ್ಗೆ ಯಾರು ದೂರು ಕೊಟ್ಟಿದ್ದಾರೆ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗ ಹೇಳುವಂತಿಲ್ಲ ಎಂದರು.
Modi Visit, Defamatory post against bp state president Nalin kumar kateel , 2 cases registered in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm