ಬ್ರೇಕಿಂಗ್ ನ್ಯೂಸ್
01-09-22 05:26 pm Mangalore Correspondent ಕರಾವಳಿ
Photo credits : TV9 kannada
ಮಂಗಳೂರು, ಸೆ.1: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ ಬಗ್ಗೆ ನಿಗಾ ಇಡಲು ಖುದ್ದಾಗಿ ಎಡಿಜಿಪಿ ಅಲೋಕ್ ಕುಮಾರ್ ಉಸ್ತುವಾರಿ ಹೊತ್ತುಕೊಂಡಿದ್ದಾರೆ.
ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ವೇದಿಕೆ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಮೈದಾನದಲ್ಲಿ ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಗರಂ ಆಗಿದ್ದು ಕೂಡಲೇ ಎಲ್ಲ ಕಡೆಗಳಲ್ಲಿ ಸಿಸಿ ಅಳವಡಿಸಲು ಕಾರ್ಯಕ್ರಮ ನಿರ್ವಹಣೆ ಹೊಣೆ ಹೊತ್ತುಕೊಂಡ ಕಂಪೆನಿ ಪ್ರತಿನಿಧಿಗಳಿಗೆ ತಾಕೀತು ಮಾಡಿದ್ದಾರೆ.

ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮರಾ ಹಾಕಿದ್ದೀರಿ. ಇದರಿಂದ ಏನು ಮಾಡೋಕೆ ಸಾಧ್ಯ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಮತ್ತು ಎಲ್ಲ ಕೋನಗಳು ಕವರ್ ಆಗುವಂತೆ ಸಿಸಿಟಿವಿ ಕ್ಯಾಮೆರಾ ಹಾಕಬೇಕು ಎಂದು ಕಾರ್ಯಕ್ರಮ ಆಯೋಜಕ ಕಂಪೆನಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಭದ್ರತೆಗೆ ನಿಯೋಜಿಸಿದ ಪೊಲೀಸರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಮೊಬೈಲ್ ನಲ್ಲಿ ಫೋಟೋ ತೆಗೆಯಬಾರದು. ನಿಮ್ಮ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲೆ ಇರಬೇಕು. ಪ್ರಧಾನಿ ಭಾಷಣ ಮಾಡುವ ಸಂದರ್ಭದಲ್ಲಿ ಭಾಷಣ ನೋಡೋದು, ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು ಎಂದು ಹೇಳಿದ್ದಾರೆ.

ಅಲ್ಲದೆ, ಕಾರ್ಯಕ್ರಮದಲ್ಲಿ ಬಂದವರ ಜೊತೆ ಯಾವುದೇ ಕಿರಿಕ್ ಮಾಡಬಾರದು. ಗೊಂದಲ ಸೃಷ್ಠಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಬಾಯಿ ಮುಚ್ಚಿಸಿ ಅಲ್ಲಿಂದ ವ್ಯಾನ್ ಹತ್ತಿರ ಕರೆತರಬೇಕು. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು. ಕಪ್ಪು ಬಟ್ಟೆಯಾಗಲೀ, ಕಪ್ಪು ಶರ್ಟ್, ಟೀ ಶರ್ಟ್ ಧರಿಸುವುದಕ್ಕೂ ಅವಕಾಶ ಇಲ್ಲ. ಜನರಲ್ಲಿ ಮ್ಯಾಚ್ ಬಾಕ್ಸ್, ಇನ್ನಿತರ ಬೆಂಕಿ ಹೊತ್ತಿಕೊಳ್ಳಬಲ್ಲ ಯಾವುದೇ ವಸ್ತುವನ್ನೂ ತರುವುದಕ್ಕೆ ಅವಕಾಶ ಇಲ್ಲ. ಈ ಬಗ್ಗೆ ಪೊಲೀಸರು ನಿಗಾ ವಹಿಸಬೇಕಾಗುತ್ತದೆ ಎಂದು ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.
Adgp Alok Kumar full on rounds as Modi to arrive in Mangalore, black clothes, phones restricted. He was also angry at the police officers as no CCTV cameras were installed covering the ground.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm