ಬ್ರೇಕಿಂಗ್ ನ್ಯೂಸ್
03-09-22 08:03 pm Mangalore Correspondent ಕರಾವಳಿ
ಉಳ್ಳಾಲ, ಆ.3: ಒಂದು ಕಾಲದಲ್ಲಿ ಹಿಂದೂ ಯುವ ಸೇನೆಯಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಯಂತ್ ಎಸ್. ಕುಂಪಲ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ಅವರು ಶನಿವಾರ ಅಪರಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯಂತ್ ಅವರು ಬಾಡಿಗೆ ಮನೆಯ ಒಳಗಡೆ ಹಾಲ್ ನಲ್ಲಿಯೇ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.


ಜಯಂತ್ ಅವರು ಸಕ್ರಿಯ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ನಿನ್ನೆ ಮಂಗಳೂರಿನ ಬಂಗ್ರ ಕೂಳೂರಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಜನರ ನಡುವೆ ತನ್ನ ಸ್ಮಾರ್ಟ್ ಫೋನನ್ನ ಕಳಕೊಂಡಿದ್ದರು. ಈ ಬಗ್ಗೆ ಇಂದು ಮಧ್ಯಾಹ್ನದ ವರೆಗೂ ಅನೇಕ ಸ್ನೇಹಿತರಲ್ಲಿ ಹೇಳಿಕೊಂಡಿದ್ದರು.

ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರ ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Hindu yuvasena leader Jayanth Kumpala commits suicide in Ullal. He had attended Modis program held by Bjp at Gold finch city and had lost his cell phone. He was telling his friends about it but suddenly afternoon he was found hanging at his house.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm