ಬ್ರೇಕಿಂಗ್ ನ್ಯೂಸ್
03-09-22 09:53 pm Mangalore Correspondent ಕರಾವಳಿ
ಮಂಗಳೂರು, ಸೆ.3 : ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಕುಡ್ಲದ ಯುವತಿ ದಿವಿತಾ ರೈ ಅವರಿಗೆ ಬಂಟರ ಮಾತೃಸಂಘ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ವಸತಿ ನಿಲಯದ ಅಮೃತೋತ್ಸವ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು ಸೆಪ್ಟಂಬರ್ 6ರಂದು ಸಂಜೆ ನಾಲ್ಕು ಗಂಟೆಗೆ ನಗರದ ರಾಮಕೃಷ್ಣ ಶಾಲೆ ಆವರಣದ ಗೀತಾ ಎಸ್.ಎಂ. ಶೆಟ್ಟಿ ಮೆಮೋರಿಯಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುನ್ನ ಜ್ಯೋತಿ ವೃತ್ತದಿಂದ ಸಭಾಂಗಣದ ವರೆಗೆ ಮೆರವಣಿಗೆ ಮೂಲಕ ತುಳುನಾಡ ಸಾಂಪ್ರದಾಯಿಕ ಶೈಲಿಯಲ್ಲಿ ದಿವಿತಾ ರೈ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಗುವುದು ಎಂದರು. ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ದಿವಿತಾ ರೈ ಅವರಿಗೆ ತವರೂರಿನ ಸನ್ಮಾನ ಅತ್ಯಂತ ಮಹತ್ವದ್ದು. ಹಾಗಾಗಿ ತುಳುನಾಡ ಸಂಸ್ಕೃತಿಯನ್ನು ವಿಶ್ವ ಮಟ್ಟದಲ್ಲಿ ಪಸರಿಸುವ ಅಮೋಘ ಕಾರ್ಯಕ್ರಮಕ್ಕೆ ಇದು ಸಾಕ್ಷಿಯಾಗಲಿದೆ. ಬಂಟರ ಸಂಘ ಅನೇಕ ವರ್ಷಗಳಿಂದ ಹೆಣ್ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಉತ್ತೇಜನ ನೀಡುತ್ತಾ ಬಂದಿದೆ. ಇದಕ್ಕೆ ಹೆಣ್ಮಕ್ಕಳಿಗಾಗಿಯೇ ವಿದ್ಯಾರ್ಥಿನಿ ನಿಲಯಗಳನ್ನು ಸ್ಥಾಪಿಸಿ ಅವರಿಗೆ ಸೂಕ್ತ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಕಾಕತಾಳೀಯ ಎನ್ನುವಂತೆ ಈ ಬಾರಿಯ ಸ್ಪರ್ಧೆಯಲ್ಲಿ ದಿವಿತಾ ರೈ, ಜಾಗತಿಕ ಸವಾಲುಗಳಲ್ಲೊಂದಾದ ಹೆಣ್ಣು ಮಕ್ಕಳ ಶಿಕ್ಷಣದ ಕುರಿತು ಮಾತನಾಡಲಿರುವುದು ಬಂಟರಿಗೆ ಹೆಮ್ಮೆ ತರುವ ವಿಷಯ ಎಂದು ಅವರು ಹೇಳಿದರು. ಬಂಟರ ಸಂಘ ಕೇವಲ ಬಂಟ ಸಮುದಾಯದ ಪ್ರತಿಭೆಗಳನ್ನು ಮಾತ್ರವಲ್ಲದೆ ತುಳುನಾಡಿನ ಎಲ್ಲಾ ಸಮುದಾಯದ ಪ್ರತಿಭೆಗಳನ್ನು ಗುರುತಿಸಿ, ಗೌರವಿಸುವ ಕಾರ್ಯವನ್ನು ನಡೆಸುತ್ತಾ ಬಂದಿದೆ. ಮುಂದೆಯೂ ಈ ಪರಂಪರೆಯನ್ನು ಮುಂದುವರಿಸಲಾಗುವುದು ಎಂದರು.
ದಿವಿತಾ ರೈ ಪರಿಚಯ
ಮೂಲತಃ ಮಂಗಳೂರಿನ ನಿವಾಸಿಗಳಾದ, ಸದ್ಯ ಮುಂಬೈನಲ್ಲಿ ನೆಲೆಸಿರುವ ದಿಲೀಪ್ ರೈ ಹಾಗೂ ಪವಿತ್ರಾ ರೈ ದಂಪತಿಯ ಪುತ್ರಿ. ಈಕೆ ಜನಿಸಿದ್ದು ಮಂಗಳೂರಿನಲ್ಲಿ ; ಬೆಳೆದಿದ್ದು ಮುಂಬೈನಲ್ಲಿ. ವಾಸ್ತುಶಿಲ್ಪ ಹಾಗೂ ಮಾಡೆಲಿಂಗ್ ಕ್ಷೇತ್ರದಲ್ಲಿ ಪರಿಣತಿ ಪಡೆದಿರುವ ಇವರು ಮುಂಬೈನ ಸರ್ ಜೆ.ಜೆ. ಕಾಲೇಜ್ ಆಫ್ ಆರ್ಕಿಟೆಕ್ಚರ್‌ನಲ್ಲಿ ಪದವೀಧರೆ. ಬ್ಯಾಡ್ಮಿಂಟನ್, ಬಾಸ್ಕೆಟ್‌ಬಾಲ್, ಚಿತ್ರಕಲೆ, ಸಂಗೀತ ಕೇಳುವುದು ಮತ್ತು ಓದುವುದು ಇವರ ಹವ್ಯಾಸಗಳು. ಇವರ ಅಣ್ಣ ದೈವಿಕ್ ರೈ ಕೂಡ ಪ್ರತಿಭಾವಂತ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತದ ತಂಡದಲ್ಲಿದ್ದರು.
ಸುದ್ದಿಗೋಷ್ಟಿಯಲ್ಲಿ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಅಮೃತೋತ್ಸವ ಸಮಿತಿ ಅಧ್ಯಕ್ಷೆ ವೀಣಾ ಟಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಯನಾ ಶೆಟ್ಟಿ, ರಾಮಕೃಷ್ಣ ವಿದ್ಯಾರ್ಥಿನಿ ನಿಲಯದ ಸಂಚಾಲಕಿ ಶಾಲಿನಿ ಶೆಟ್ಟಿ, ಕೋಶಾಧಿಕಾರಿ ಸವಿತಾ ಚೌಟ ಉಪಸ್ಥಿತರಿದ್ದರು.
Divita Rai crowned Miss Diva Universe 2022 to be facilitated in her home town Mangalore by Bunts community.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm