ಬ್ರೇಕಿಂಗ್ ನ್ಯೂಸ್
04-09-22 06:07 pm Mangalore Correspondent ಕರಾವಳಿ
ಮಂಗಳೂರು, ಸೆ.4: ಪಂಚವಟಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಸಾವಿರಾರು ಮಂದಿಗೆ ಮೋಸ ಎಸಗಲಾಗಿದ್ದು, ಈ ಬಗ್ಗೆ ಮಂಗಳೂರಿನ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಾಗಿಲ್ಲ. ಕೂಡಲೇ ಸೊಸೈಟಿ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿತರನ್ನು ಬಂಧಿಸುವಂತೆ ಆಗ್ರಹಿಸಿ ಸೆ.5ರಂದು ಬೆಳಗ್ಗೆ ಹತ್ತು ಗಂಟೆಗೆ ನಗರದ ಕ್ಲಾಕ್ ಟವರ್ ಎದುರಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಆಶ್ರಯದಲ್ಲಿ ಸಂತ್ರಸ್ತರ ಪ್ರತಿಭಟನೆ ನಡೆಯಲಿದೆ. ನೂರಾರು ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಆರ್ ಎಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಲೆಕ್ಸಾಂಡರ್ ಡಿಸೋಜ ತಿಳಿಸಿದ್ದಾರೆ. ಮಂಗಳೂರು, ಉಡುಪಿ, ಬೆಂಗಳೂರು, ತುಮಕೂರು, ಮೈಸೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕಚೇರಿ ಹೊಂದಿದ್ದ ಪಂಚವಟಿ ಸೊಸೈಟಿಯಲ್ಲಿ ಸಾವಿರಾರು ಮಂದಿ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದರು. ಆದರೆ ಸೊಸೈಟಿಯವರು ದಿಢೀರ್ ಆಗಿ ಕಚೇರಿಯನ್ನು ಬಂದ್ ಮಾಡಿದ್ದು, ಭಾರೀ ಮೋಸ ಮಾಡಿದ್ದಾರೆ.

ಇದರಿಂದಾಗಿ ಆರ್ ಡಿ, ಡಿಪಾಸಿಟ್ ಎಂದು ಹಣ ಹೂಡಿಕೆ ಮಾಡಿದ್ದ ಬಡವರು ಈಗ ಬೀದಿಗೆ ಬೀಳುವಂತಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಹಣ ಕಳಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಸೊಸೈಟಿ ನಷ್ಟ ತೋರಿಸಿ ಕಚೇರಿ ಮುಚ್ಚಿದ್ದು, ಕಂಪನಿ ಡೈರೆಕ್ಟರ್ ಗಳು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ, ಎಫ್ಐಆರ್ ದಾಖಲಿಸದೆ ಮೀನ ಮೇಷ ಎಣಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ನಮ್ಮ ಹಣವನ್ನು ಹಿಂತಿರುಗಿಸಬೇಕು ಎಂದು ಸಂತ್ರಸ್ತರು ಒತ್ತಾಯ ಮಾಡಿದ್ದಾರೆ.
Panchawati Multistate Co Operative Credit Society cheats in crores, protest held by those who have lost their money on September 5th at Clock tower in Mangalore to take strict action against the directors and give justice to the oppressed. Recently Headline Karnataka exposed the scam of crores by Panchawathi.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am