ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm