ಬ್ರೇಕಿಂಗ್ ನ್ಯೂಸ್
05-09-22 10:38 pm Mangalore Correspondent ಕರಾವಳಿ
ಮಂಗಳೂರು, ಸೆ.5: ಈ ಬಾರಿ ನಾರಾಯಣ ಗುರುಗಳ ರಾಜ್ಯ ಮಟ್ಟದ ಜಯಂತಿಯನ್ನು ಸೆ.10ರಂದು ಮಂಗಳೂರಿನಲ್ಲಿ ಆಚರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷವೂ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಜಯಂತಿಯನ್ನು ಆಚರಿಸಲಾಗುತ್ತಿತ್ತು, ಆದರೆ ಈ ಬಾರಿ ಮಂಗಳೂರು ನಗರದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಗುವುದು, ಇದು ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ, ಎಲ್ಲಾ ಸಮುದಾಯಗಳೂ ಒಟ್ಟಾಗಿ ಸೇರಿ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆಯ ಸಹಭಾಗಿತ್ವ ಅತ್ಯಗತ್ಯವಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಜಯಂತಿ ಪ್ರಯುಕ್ತ ಸೆ.10ರ ಸಂಜೆ 4ಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವೈವಿಧ್ಯಮಯ ಕಲಾತಂಡಗಳಿಂದ ಮೆರವಣಿಗೆ ಆಯೋಜಿಸಲಾಗುವುದು. ನಾರಾಯಣ ಗುರುಗಳ ಚರಿತ್ರೆ ಬಿಂಬಿಸುವ ಚಿತ್ರ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗುವುದು. ಸಂಜೆ 6ಕ್ಕೆ ಟಿ.ಎಂ.ಎ. ಪೈ ಭವನದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ರಾಜ್ಯದ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗುವುದು ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.
Narayana Guru state level program to be held in Mangalore says Sunil Kumar
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 01:14 pm
HK News Desk
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
06-09-26 06:11 pm
HK News Staffer
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm