ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm