ಬ್ರೇಕಿಂಗ್ ನ್ಯೂಸ್
07-09-22 02:00 pm Mangalore Correspondent ಕರಾವಳಿ
ಮಂಗಳೂರು, ಸೆ.7: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಕ್ಷಿಣ ಕನ್ನಡ, ಕೊಡಗು ಮತ್ತು ಮೈಸೂರು ಜಿಲ್ಲೆಗಳ 33 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಆರೋಪಿಗಳ ಮನೆಗಳು, ಅವರಿಗೆ ಸಹಕರಿಸಿದ ಎಸ್ಡಿಪಿಐ ಮತ್ತು ಪಿಎಫ್ಐ ಪ್ರಮುಖರ ಮನೆಗಳಿಗೂ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಎನ್ಐಎ ಅಧಿಕಾರಿಗಳು ಪತ್ರಿಕಾ ಹೇಳಿಕೆ ನೀಡಿದ್ದು, 70ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಸ್ಥಳೀಯ ಪೊಲೀಸರ ಸಹಕಾರದಲ್ಲಿ ದಾಳಿ ನಡೆಸಿದ್ದಾರೆ. ಇದಕ್ಕಾಗಿ ಖಾಸಗಿ ಮತ್ತು ಸರಕಾರಿ ಸೇರಿ 55ಕ್ಕೂ ಹೆಚ್ಚು ಇನ್ನೋವಾ ವಾಹನಗಳನ್ನು ಬಳಸಲಾಗಿದೆ ಎನ್ನುವ ಮಾಹಿತಿ ನೀಡಿದ್ದಾರೆ. ಇದಲ್ಲದೆ, ಒಂದು ಸಮುದಾಯವನ್ನು ಭಯಪಡಿಸುವುದು ಕೊಲೆ ಪ್ರಕರಣದ ಉದ್ದೇಶವಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆಯ ಮೂಲಕ ಸಮಾಜದಲ್ಲಿ ಭೀತಿ ಮೂಡಿಸುವ ಷಡ್ಯಂತ್ರ ಹೆಣೆದಿದ್ದರು, ಬಂಧಿತ ಆರೋಪಿಗಳೆಲ್ಲ ಪಿಎಫ್ಐ ಸಂಘಟನೆಯ ಸಕ್ರಿಯ ಸದಸ್ಯರು ಎನ್ನುವುದನ್ನೂ ಪತ್ತೆ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಕ್ಕಿಲಾಡಿ, ಸಾಲ್ಮರ, ಮಿತ್ತೂರು, ಅರಿಯಡ್ಕ ಮತ್ತು ಸುಳ್ಯ ತಾಲೂಕಿನ ಬೆಳ್ಳಾರೆ, ನಾವೂರಿನಲ್ಲಿ ದಾಳಿ ನಡೆಸಲಾಗಿತ್ತು. ಆರೋಪಿಗಳು ಕೃತ್ಯ ಎಸಗಿದ ಬಳಿಕ ಮಡಿಕೇರಿ, ಮೈಸೂರಿನಲ್ಲಿ ಅವಿತುಕೊಳ್ಳಲು ಸಹಕಾರ ನೀಡಿದ್ದಾರೆ ಎನ್ನಲಾದ ಮನೆಗಳಿಗೂ ದಾಳಿ ನಡೆದಿದೆ. ಹೀಗಾಗಿ ಕೊಲೆ ಕೃತ್ಯಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷ ಸಹಕಾರ ನೀಡಿದವರನ್ನೂ ಬಲೆಗೆ ಕೆಡವಲು ಎನ್ಐಎ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಪುತ್ತೂರಿನ ಕಬಕ ಸಮೀಪದ ಮಿತ್ತೂರಿನ ಎಸ್ಡಿಪಿಐ ಸಂಘಟನೆಗೆ ಸೇರಿದ್ದೆನ್ನಲಾದ ಫ್ರೀಡಂ ಕಮ್ಯುನಿಟಿ ಹಾಲ್, ಅಲ್ಲಿದ್ದ ಕಚೇರಿ, ಪಿಎಫ್ಐ ಸ್ಥಳೀಯ ಪ್ರಮುಖರಾದ ಸಾದಿಕ್ ಸಾಲ್ಮರ, ಬೆಳ್ಳಾರೆಯ ಇಕ್ಬಾಲ್, ಕುಂಬ್ರದ ಜಾಬಿರ್ ಅರಿಯಡ್ಕ, ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯ ಮಸೂದ್ ಅಗ್ನಾಡಿ, ಮಡಿಕೇರಿಯಲ್ಲಿ ತುಫೇಲ್ ಎಂಬವರ ನಿವಾಸಗಳಿಗೆ ದಾಳಿ ನಡೆದಿರುವುದಾಗಿ ಹೇಳಲಾಗುತ್ತಿದೆ. ಎಸ್ಡಿಪಿಐ- ಪಿಎಫ್ಐ ನಾಯಕರ ಮನೆ, ಕಚೇರಿಗಳಲ್ಲಿ ನಡೆಸಿದ ದಾಳಿ ವೇಳೆ ಸುಧಾರಿತ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು, ಕರಪತ್ರಗಳು, ಜಿಹಾದಿ ವಿಚಾರಗಳಿದ್ದ ಪುಸ್ತಕಗಳು, ಲ್ಯಾಪ್ ಟಾಪ್, ಹಾರ್ಡ್ ಡಿಸ್ಕ್, ನಗದನ್ನು ವಶಕ್ಕೆ ಪಡೆಯಲಾಗಿದೆ. ಪುತ್ತೂರಿನಲ್ಲಿ ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ದರ್ಬೆಯ ನಿರೀಕ್ಷಣಾ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಬಳಿಕ ಎನ್ಐಎ ಅಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟೀಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈಗಾಗಲೇ ಪ್ರಕರಣ ಸಂಬಂಧಿಸಿ ಸುಳ್ಯದ ಶಿಹಾಬುದ್ದೀನ್, ಅಂಕತ್ತಡ್ಕದ ರಿಯಾಜ್, ಎಲಿಮಲೆಯ ಬಶೀರ್, ಸವಣೂರಿನ ಝಾಕೀರ್, ಬೆಳ್ಳಾರೆಯ ಶಫೀಕ್, ಪಳ್ಳಿಮಜಲಿನ ಸದ್ದಾಂ, ಹ್ಯಾರಿಸ್, ಗೌರಿಹೊಳೆಯ ನೌಫಾಲ್, ನಾವೂರಿನ ಆಬಿದ್ ಮತ್ತು ಜಟ್ಟಿಪಳ್ಳದ ಕಬೀರ್ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಗೆ 15 ದಿನಗಳ ಕಾಲ ತಲೆಮರೆಸಿಕೊಳ್ಳಲು ಸಹಕರಿಸಿದವರು ಮತ್ತು ಹಣಕಾಸು ನೆರವು ನೀಡಿದವರನ್ನು ಗುರಿಯಾಗಿಸಿ ಈಗ ಎನ್ಐಎ ತನಿಖೆ ನಡೆಸುತ್ತಿದ್ದಾರೆ. ಕೇರಳದ ರೀತಿಯಲ್ಲೇ ಪ್ರವೀಣ್ ಕೊಲೆ ನಡೆದಿದೆ ಎನ್ನುವುದನ್ನು ಎನ್ಐಎ ಅಧಿಕಾರಿಗಳು ತನಿಖೆಯಲ್ಲಿ ಪತ್ತೆ ಮಾಡಿದ್ದಾರೆ.
ಕಮ್ಯುನಿಟಿ ಹಾಲ್ ನಲ್ಲಿ ಏನು ನಡೀತಿತ್ತು ?
ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ನಲ್ಲಿ ಎಸ್ಡಿಪಿಐ ಪ್ರಮುಖರು, ಕಾರ್ಯಕರ್ತರು ಸಭೆ ಸೇರಿ ಚರ್ಚೆ ನಡೆಸುತ್ತಿದ್ದರು ಎನ್ನಲಾಗುತ್ತಿದ್ದು, ಅಲ್ಲಿಯೇ ಕೊಲೆಗೆ ಸ್ಕೆಚ್ ರೂಪಿಸಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಸಭಾಂಗಣದ ಸಿಸಿಟಿವಿ ದೃಶ್ಯಾವಳಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹಾಲ್ ನಲ್ಲಿ ನಡೆಯುತ್ತಿದ್ದ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಪೊಲೀಸರಿಗೆ ಪ್ರವೇಶ ಇರುತ್ತಿರಲಿಲ್ಲ. ಕೇವಲ ತಮ್ಮದೇ ಕಾರ್ಯಕರ್ತರನ್ನು ಮಾತ್ರ ಸೇರಿಸಿ ಸಮಾವೇಶ ನಡೆಸುತ್ತಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸರಿಗೂ ಸಂಶಯಗಳಿದ್ದವು. ಇದೀಗ ಎನ್ಐಎ ಅಧಿಕಾರಿಗಳು ಈ ಹಾಲ್ ಮೇಲೆ ನಿಗಾ ಇಟ್ಟಿದ್ದು, ಅಲ್ಲಿನ ಚಲನವಲನಗಳ ಬಗ್ಗೆ ನಿಗಾ ಇಟ್ಟಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬೆಳ್ಳಂಬೆಳಗ್ಗೆ ಎನ್ಐಎ ತಂಡದಿಂದ 30ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ
PFI members killed Praveen Bellare to strike terror and to bring fear among people says NIA. The National Investigation Agency (NIA) on Tuesday conducted searches at 33 locations in Mysuru, Kodagu and Dakshina Kannada districts of Karnataka in a case pertaining to the killing of BJP Yuva Morch worker Praveen Nettaru at Bellare on July 26.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm